ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ರಸ್ತೆ ತಡೆ ಮಾಡಿದ ನೂರಕ್ಕೂ ಹೆಚ್ಚು ಪ್ರತಿಭಟನೆಕಾರರ ಬಂಧನ

ಉಡುಪಿ: ಉಡುಪಿಯಲ್ಲಿ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ ಪ್ರತಿಭಟನೆ, ರಸ್ತೆ ತಡೆ ಬಿಸಿ ಜೋರಾಗಿದೆ.

ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ರಸ್ತೆ ತಡೆ ಮಾಡಿದ ನೂರಕ್ಕೂ ಹೆಚ್ಚು ಪ್ರತಿಭಟನೆಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮುನ್ನ ಸಿಟಿ ಬಸ್ ಓಡಿಸದಂತೆ ರಸ್ತೆಗೆ ಪ್ರತಿಭಟನಾಕಾರರು ಅಡ್ಡಗಟ್ಟಿದರು.

ಈ ವೇಳೆ ಕರ್ತವ್ಯದಲ್ಲಿದ್ದ ಪೊಲೀಸರು ಆಗಮಿಸಿ ನೂರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿ ವ್ಯಾನ್ ನಲ್ಲಿ ಕರೆದೊಯ್ದರು. ಉಡುಪಿ ನಗರದಲ್ಲಿ ಮಾತ್ರ ಪ್ರತಿಭಟನೆ ಬಿಸಿ ಜೋರಾಗಿದ್ದು, ಜಿಲ್ಲೆಯ ಉಳಿದೆಡೆಗಳಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ. ಸಿಪಿಐಎಂ ನೇತೃತ್ವದಲ್ಲಿ ಇಂದಿನ ಪ್ರತಿಭಟನೆಗೆ ಹದಿನಾಲ್ಕು ಸಂಘಟನೆಗಳು ಬೆಂಬಲ ನೀಡಿವೆ. ಜೊತೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಕೂಡ ಬೆಂಬಲ ವ್ಯಕ್ತಪಡಿಸಿವೆ.

Edited By : Nagesh Gaonkar
Kshetra Samachara

Kshetra Samachara

28/09/2020 11:50 am

Cinque Terre

16.31 K

Cinque Terre

2

ಸಂಬಂಧಿತ ಸುದ್ದಿ