ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಉಜಿರೆಯಲ್ಲಿ ದೇಶ ವಿರೋಧಿ ಘೋಷಣೆ; ಮೂವರು ಅಂದರ್

ಮಂಗಳೂರು: ಗ್ರಾಪಂ ಚುನಾವಣೆ ಸಂಭ್ರಮಾಚರಣೆ ಸಂದರ್ಭ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ದೇಶ ವಿರೋಧಿ ಘೋಷಣೆ ಕೂಗಿರುವ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪಿಲಿಚಂಡಿ ಕಲ್ಲು ಕುವೆಟ್ಟು ನಿವಾಸಿಗಳಾದ ಮೊಹಮ್ಮದ್ ಹರ್ಷದ್( 22 ), ದಾವೂದ್( 36) ಹಾಗೂ ಇಸಾಕ್ (28) ಬಂಧಿತ ಆರೋಪಿಗಳು.

ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಮಾತನಾಡಿ, ಈ ವೀಡಿಯೊವನ್ನು ಹೊರತುಪಡಿಸಿ ಈ ಪ್ರಕರಣಕ್ಕೆ ಸಂಬಂಧಿಸಿದ ಮೊಬೈಲ್ ಮೂಲಕ ಚಿತ್ರೀಕರಿಸಲಾದ ಇತರ ಎರಡು ವೀಡಿಯೊಗಳು ಲಭ್ಯವಾಗಿದ್ದು, ಅವುಗಳನ್ನೂ ತಾಂತ್ರಿಕ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಪ್ರಕರಣದ ತನಿಖೆಯ ಆಧಾರದಲ್ಲಿ ಹಾಗೂ ಸಂಗ್ರಹಿಸಲಾಗಿರುವ ಸಾಕ್ಷ್ಯಗಳ ಅಧಾರದಲ್ಲಿ ಮೂವರನ್ನು ಬಂಧಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಆರೋಪಿಗಳಿದ್ದಲ್ಲಿ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗುತ್ತದೆ. ಬಂಧಿಸಿರುವ ಆರೋಪಿಗಳ ವಿಚಾರಣೆ ನಡೆಯುತ್ತಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಹೇಳಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

31/12/2020 02:48 pm

Cinque Terre

25.03 K

Cinque Terre

7