ಉಡುಪಿ: ಹೊಸ ವರ್ಷಾಚರಣೆಯ ಸಂಭ್ರಮದ ನೆಪದಲ್ಲಿ ಕಂಠಪೂರ್ತಿ ಕುಡಿದು ಸಾರ್ವಜನಿಕ ರಸ್ತೆಯಲ್ಲಿ ಪುಂಡಾಟ ಮಾಡುತ್ತಿದ್ದ ಯುವಕರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.
ಉಡುಪಿಯಲ್ಲಿ ಹೊಟೇಲ್ ಕ್ಲಬ್, ರೆಸಾರ್ಟ್ ಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಜಿಲ್ಲಾಡಳಿತ ಅವಕಾಶ ನೀಡಿತ್ತು. ಆದರೆ, 12 ಗಂಟೆ ನಂತರ ಯಾರೂ ಕೂಡ ಸಾರ್ವಜನಿಕ ರಸ್ತೆಯಲ್ಲಿ ಓಡಾಡಬಾರದು ಎಂದು ಜಿಲ್ಲಾಧಿಕಾರಿ ಕಟ್ಟಪ್ಪಣೆ ಮಾಡಿದ್ದರು.
ರಾತ್ರಿ 12 ಗಂಟೆ ಸುಮಾರಿಗೆ ಹೋಟೆಲ್ ಗಳಲ್ಲಿ ಪಾರ್ಟಿ ಮುಗಿಸಿ ಹೊರಬಂದ ನೂರಾರು ಜನರು ಕಾಯಿನ್ ಸರ್ಕಲ್ ಬಳಿ ರಸ್ತೆಯನ್ನು ಬ್ಲಾಕ್ ಮಾಡಿ ಪುಂಡಾಟ ಮೆರೆದಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ ಬಂದ ಮಣಿಪಾಲ ಪೊಲೀಸರು ಲಘು ಲಾಠಿ ಪ್ರಹಾರ ಮಾಡುವ ಮೂಲಕ ಜನರನ್ನು ಚದುರಿಸಿದ್ದಾರೆ. ಸದ್ಯ, ಈ ವೀಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
Kshetra Samachara
01/01/2021 04:26 pm