ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ನ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸುಮಾರು 140ಕ್ಕೂ ಅಧಿಕ ಎನ್ ಡಿಪಿಎಸ್ ಆರೋಪಿಗಳನ್ನು ಇಂದು ನಗರದ ಪೊಲೀಸ್ ಮೈದಾನದಲ್ಲಿ ಪರೇಡ್ ನಡೆಸಲಾಯಿತು.
ಈ ಸಂದರ್ಭ ಎಲ್ಲ ಆರೋಪಿಗಳನ್ನು ಮೈದಾನದಲ್ಲಿ ಮೂರು ಸುತ್ತು ಪರೇಡ್ ನಡೆಸಲಾಯಿತು. ಆರೋಪಿಗಳಿಗೆ ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಿದ ಪೊಲೀಸ್ ಆಯುಕ್ತರು ಮತ್ತೂ ಇಂತಹ ಪ್ರಕರಣಗಳಲ್ಲಿ ಮುಂದುವರಿದವರ ಮೇಲೆ ರೌಡಿ ಶೀಟರ್ ಪ್ರಕರಣ ದಾಖಲಿಸಲಾಗುವುದೆಂದು ಖಡಕ್ ವಾರ್ನಿಂಗ್ ನೀಡಿದರು.
ಬಳಿಕ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾತನಾಡಿ, ಆರೋಪಿಗಳ ಮನ ಪರಿವರ್ತನೆ ಮಾಡುವ ಉದ್ದೇಶದಿಂದ ಈ ಪರೇಡ್ ನಡೆಸಲಾಗುತ್ತಿದ್ದು, ಡ್ರಗ್ ಪೆಡ್ಲಿಂಗ್ ನಡೆಯದಂತೆ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಕೃತ್ಯಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
Kshetra Samachara
06/01/2021 03:04 pm