ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರಿಗೆ ಬಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ: ನಗರದಾದ್ಯಂತ ತೀವ್ರ ಕಟ್ಟೆಚ್ಚರ

ಮಂಗಳೂರು: ಭಾರತದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಶರದ್‌ ಅರವಿಂದ್‌ ಬೋಬ್ಡೆ ಬುಧವಾರ ರಾತ್ರಿ ಮಂಗಳೂರಿಗೆ ಆಗಮಿಸಿದ್ದಾರೆ. ಗುರುವಾರ ಬೆಳಗ್ಗೆ ಶೃಂಗೇರಿ ಮಠಕ್ಕೆ ಭೇಟಿ ನೀಡುವ ಉದ್ದೇಶದಿಂದ ಮಂಗಳೂರಿಗೆ ಆಗಮಿಸಿದ ಅವರು, ರಾತ್ರಿ ನಗರದ ಬಿಜೈ ಕಾಪಿಕಾಡ್‌ನ ಹೋಟೆಲ್‌ ಓಶಿಯನ್‌ ಪರ್ಲ್‌ನಲ್ಲಿ ವಾಸ್ತವ್ಯ ಮಾಡಿದ್ದಾರೆ.

ಸಿಜೆಐ ಭೇಟಿ ಹಿನ್ನೆಲೆಯಲ್ಲಿ ಅವರು ವಾಸ್ತವ್ಯ ಮಾಡುವ ಹೋಟೆಲ್‌ ಸಹಿತ ಮಂಗಳೂರು ನಗರದಾದ್ಯಂತ ಭಾರಿ ಬಂದೋ ಬಸ್ತ್‌ ಏರ್ಪಡಿಸಲಾಗಿದೆ. ಅವರು ಸಂಚರಿಸುವ ರಸ್ತೆ ಮಾರ್ಗವನ್ನು ಸಂಪೂರ್ಣ ಬಂದ್‌ ಮಾಡಿ ಝೀರೋ ಟ್ರಾಫಿಕ್‌ ವ್ಯವಸ್ಥೆ ಮಾಡಲಾಗಿತ್ತು. ಸಾರ್ವಜನಿಕರಿಗೆ ಹೋಟೆಲ್‌ ಪ್ರವೇಶ ನಿರ್ಬಂಧಿಸಲಾಗಿತ್ತು.

ಗುರುವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ ಮೂಲಕ ಶೃಂಗೇರಿಗೆ ತೆರಳಲಿರುವ ಅವರು ಅಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಶುಕ್ರವಾರ ಮರಳಿ ದಿಲ್ಲಿಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

Edited By : Nagaraj Tulugeri
Kshetra Samachara

Kshetra Samachara

14/01/2021 08:47 am

Cinque Terre

15.8 K

Cinque Terre

4

ಸಂಬಂಧಿತ ಸುದ್ದಿ