ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ಸಂಚಾರ ನಿಯಮ ಪಾಲನೆಯಿಂದ ಅಪಘಾತ ನಿಯಂತ್ರಣ"

ಮಂಗಳೂರು: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಮಂಗಳೂರಿನ ಎಂ.ಜಿ.ರೋಡ್ ನಲ್ಲಿರೋ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ ಬುಧವಾರ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಉದ್ಘಾಟನೆ ನಡೆಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ , ಸಂಚಾರ ನಿಯಮ ಉಲ್ಲಂಘಿಸುವುದನ್ನು ನಿಯಂತ್ರಿಸುವುದಕ್ಕಾಗಿ ದಂಡ ಹಾಕಲಾಗುತ್ತದೆಯೇ ಹೊರತು ಸರಕಾರದ ಬೊಕ್ಕಸ ತುಂಬಿಸುವ ಉದ್ದೇಶದಿಂದಲ್ಲ. ನಿರ್ಲಕ್ಷ್ಯದಿಂದಾಗಿಯೇ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಇದರಿಂದಾಗಿ ಸಾಕಷ್ಟು ಜನರ ಜೀವ ಬಲಿಯಾಗುತ್ತಿದೆ. ಒಟ್ಟು ಅಪರಾಧ ಪ್ರಕರಣಗಳಲ್ಲಿ ಸಂಭವಿಸುವ ಸಾವಿನಲ್ಲಿ ರಸ್ತೆ ಅಪಘಾತದ್ದೇ ಅಧಿಕವಾಗಿರುತ್ತದೆ. ಸಂಚಾರಿ ನಿಯಮಗಳನ್ನು ಸಮರ್ಪಕವಾಗಿ ಪಾಲಿಸಿದರೆ ಅಪಘಾತ ಪ್ರಕರಣಗಳು ತಾನಾಗಿಯೇ ನಿಯಂತ್ರಿಸಲ್ಪಡುತ್ತವೆ

ಎಂದರು.

Edited By : Nagesh Gaonkar
Kshetra Samachara

Kshetra Samachara

21/01/2021 01:24 pm

Cinque Terre

11.48 K

Cinque Terre

0

ಸಂಬಂಧಿತ ಸುದ್ದಿ