ಮಂಗಳೂರು: ಖಾಸಗಿ ಬಸ್ ನಲ್ಲಿ ಹಾಡಹಗಲೇ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿ ಹುಸೇನ್ ಎಂದು ಗುರುತಿಸಲಾಗಿದೆ. ದೇರಳಕಟ್ಟೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ನಲ್ಲಿ ಯುವತಿ ಕುಳಿತಿದ್ದ ಸೀಟ್ ನ ಪಕ್ಕದಲ್ಲಿ ಕೂತು ಆರೋಪಿ ಲೈಂಗಿಕ ಕಿರುಕುಳ ನೀಡಿದ್ದ.
ತನಗಾದ ನೋವನ್ನು ಯುವತಿ ಸಾಮಾಜಿಕ ಜಾಲತಾಣ ಇನ್ ಸ್ಟ್ರಾ ಗ್ರಾಂ ಮೂಲಕ ತೋಡಿಕೊಂಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಮಂಗಳೂರು ಮಹಿಳಾ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸ್ ಕಮಿಷನರ್ ಎದುರೇ ಆರೋಪಿಗೆ ಸಂತ್ರಸ್ತೆಯಿಂದ ಕಪಾಳಮೋಕ್ಷ: ಖಾಸಗಿ ಬಸ್ ನಲ್ಲಿ ಯುವತಿಗೆ ದೈಹಿಕ ಕಿರುಕುಳ ನೀಡಿದ್ದ ಆರೋಪಿಗೆ ಸಂತ್ರಸ್ತೆ ಮಂಗಳೂರು ನಗರದ ಪೊಲೀಸ್ ಕಮೀಷನರ್ ಎದುರೇ ಕಾಮುಕನಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಮಂಗಳೂರು ಕಮೀಷನರ್ ಎನ್ ಶಶಿಕುಮಾರ್ ರವರು
ಆರೋಪಿ ಹಾಗೂ ಸಂತ್ರಸ್ತ ಯುವತಿ ಜೊತೆ ಪತ್ರಿಕಾಗೋಷ್ಠಿ ನಡೆಸಿದ್ದರು. ಪ್ರೆಸ್ ಮೀಟ್ ಬಳಿಕ ಯುವತಿ ಆರೋಪಿಗೆ ಕಪಾಳಮೋಕ್ಷ ಮಾಡಿದ್ದಾಳೆ.
Kshetra Samachara
21/01/2021 03:16 pm