ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ತುರ್ತು ಸೇವೆಗೆ 12 ಎಮರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟಿಂಗ್ ಸಿಸ್ಟಮ್ ವಾಹನಕ್ಕೆ ಚಾಲನೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ 12 ಎಮರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟಿಂಗ್ ಸಿಸ್ಟಮ್ ವಾಹನಗಳಿಗೆ ಇಂದು ಚಾಲನೆ ನೀಡಲಾಯಿತು.

ಮಣಿಪಾಲ ಸಿಂಡಿಕೇಟ್ ಸರ್ಕಲ್ ಬಳಿ ಹಸಿರು ನಿಶಾನೆ ತೋರಿಸುವ ಮೂಲಕ ವಾಹನಗಳಿಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಸಾರ್ವಜನಿಕರು ಇನ್ನು ಮುಂದೆ ಟೋಲ್ ಫ್ರೀ ನಂಬರ್ 100ರ ಬದಲಾಗಿ 112ಕ್ಕೆ ಕರೆ ಮಾಡಿದಲ್ಲಿ ಅವಶ್ಯಕತೆ ಇರುವ ಸ್ಥಳಕ್ಕೆ ಅತಿ ಸಮೀಪ ಇರುವ ಇಆರ್ ಎಸ್ಎಸ್ ವಾಹನ ಬಂದು ಅಗತ್ಯ ಸೇವೆ ನೀಡಲಿದೆ. ಈ ವಾಹನವು ದಿನದ 24 ಗಂಟೆಯೂ ಕಾರ್ಯಾಚರಿಸಲಿದೆ ಎಂದರು.

ಟೋಲ್ ಫ್ರೀ ನಂಬರ್ 112 ನೇರವಾಗಿ ಬೆಂಗಳೂರು ಕೇಂದ್ರದ ನಿಯಂತ್ರಣದಲ್ಲಿದ್ದು, ಕರೆ ಬಂದ ಸ್ಥಳಕ್ಕೆ ಕ್ಷಿಪ್ರವಾಗಿ ಅಗತ್ಯ ಸೇವೆ ಸಲ್ಲಿಸಲು ಪ್ರತಿ ವಾಹನದಲ್ಲಿ ಓರ್ವ ಎಎಸ್ಸೈ ದರ್ಜೆಯ ಪೊಲೀಸ್ ಅಧಿಕಾರಿ ಇರುತ್ತಾರೆ. ಈ ವಾಹನಗಳು ಹೆಚ್ಚಿನ ಅಪರಾಧಗಳು ನಡೆದ ಸ್ಥಳಗಳು, ಶಾಲಾ- ಕಾಲೇಜುಗಳ ಸಮೀಪ, ಜನದಟ್ಟಣೆ ಪ್ರದೇಶ, ಹೆಚ್ಚು ವಾಹನ ಸಂಚಾರ ಇರುವ ಪ್ರದೇಶಗಳಲ್ಲಿ ಕಾರ್ಯಾಚರಿಸಲಿವೆ ಎಂದರು.

ಈ ಸಂದರ್ಭ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಡಿವೈಎಸ್ಪಿ ಸುಧಾಕರ ನಾಯಕ್, ಮಣಿಪಾಲ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ್ ಗೌಡ ಮೊದಲಾದವರು ಹಾಜರಿದ್ದರು.

Edited By : Manjunath H D
Kshetra Samachara

Kshetra Samachara

24/01/2021 11:20 am

Cinque Terre

12.32 K

Cinque Terre

2

ಸಂಬಂಧಿತ ಸುದ್ದಿ