ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಕೆಎಸ್ ರಾವ್ ನಗರದಲ್ಲಿ ಕೊಳವೆಬಾವಿಗೆ ನಾಗರಿಕರಿಂದ ತಡೆ, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ.

ಮುಲ್ಕಿ: ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಕೊಲ್ನಾಡು ಕೈಗಾರಿಕಾ ಪ್ರದೇಶದ ಕೆಎಸ್ ರಾವ್ ನಗರದಲ್ಲಿ ನಗರಪಂಚಾಯತ್ ಮೂಲಕ ಕೊಳವೆ ಬಾವಿ ಹಾಕಲು ಬಂದವರನ್ನು ಸ್ಥಳೀಯ ನಾಗರಿಕರು ತಡೆದಿದ್ದಾರೆ. ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರಪೂಜಾರಿ ಸ್ಥಳೀಯರಿಗೆ ನೀರಿನ ಸಮಸ್ಯೆ ಬಗ್ಗೆ ಮನವರಿಕೆ ಮಾಡುವ ಯತ್ನದಲ್ಲಿದ್ದಾಗ ಸ್ಥಳೀಯರು ಆಕ್ರೋಶಗೊಂಡು ಈ ಪರಿಸರದಲ್ಲಿ 15 ಮನೆಗಳಿದ್ದು 14 ಬಾವಿಗಳಿವೆ ಇಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಕೊಳವೆ ಬಾವಿ ಹಾಕಲು ಬಿಡುವುದಿಲ್ಲ ಎಂದು ಆಕ್ರೋಶ ಭರಿತರಾಗಿ ಹೇಳಿದರು. ಆಗ ಸ್ಥಳಕ್ಕೆ ಆಗಮಿಸಿದ ಮುಲ್ಕಿ ನಗರ ಪಂಚಾಯತ್ ಸದಸ್ಯ ಸಂದೀಪ್ ಹಾಗೂ ಸಾಮಾಜಿಕ ಕಾರ್ಯಕರ್ತ ಸಮೀರ್ ಕೊಳವೆಬಾವಿಗೆ ಸ್ಥಳೀಯರ ವಿರೋಧವನ್ನು ಕಂಡು ಕೊಳವೆ ಬಾವಿ ತೋಡುವುದನ್ನು ನಿಲ್ಲಿಸಲು ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿಗೆ ಮನವಿ ಮಾಡಿದರು. ಈ ಸಂದರ್ಭ ಸ್ಥಳದಲ್ಲಿ ಮಾತಿನ ಚಕಮಕಿ ನಡೆದು ಉದ್ವಿಗ್ನ ಸ್ಥಿತಿ ಉಂಟಾಯಿತು. ಕೂಡಲೇ ಸ್ಥಳಕ್ಕೆ ಮುಲ್ಕಿ ಸರ್ಕಲ್ ಇನ್ಸ್ಪೆಕ್ಟರ್ ಕುಸುಮಾಧರ ಮತ್ತು ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರಪೂಜಾರಿ ಮಾತನಾಡಿ ನಗರ ಪಂಚಾಯತ್ ವ್ಯಾಪ್ತಿಯ ಕೆಎಸ್ ರಾವ್ ನಗರದಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು ನಾಗರಿಕರು ಸರಕಾರಿ ಸ್ಥಳದಲ್ಲಿ ಕೊಳವೆ ಬಾವಿ ಹಾಕಲು ಆಕ್ಷೇಪ ಮಾಡುತ್ತಿದ್ದಾರೆ.

ಮುಂದಿನ ದಿನಗಳಲ್ಲಿ ಈ ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾದರೆ ನಾವು ಜವಾಬ್ದಾರರಲ್ಲ ಎಂದು ಖಡಾಖಂಡಿತವಾಗಿ ಉತ್ತರಿಸಿದರು. ಸಾಮಾಜಿಕ ಕಾರ್ಯಕರ್ತ ಸಮೀರ್ ಎ ಎಚ್ ಮಾತನಾಡಿ ಕೊಳವೆ ಬಾವಿ ಬಗ್ಗೆ ಸ್ಥಳೀಯ ಪಂಚಾಯತ್ ಸದಸ್ಯರ ಗಮನಕ್ಕೆ ತಾರದೆ ಹಾಕಲು ಬಂದಿದ್ದಾರೆ. ಈ ಭಾಗದಲ್ಲಿ ನೀರಿನ ಸಮಸ್ಯೆ ಇಲ್ಲ. ಬೇರೆ ಕಡೆ ಸೂಕ್ತ ಜಾಗ ಗುರುತಿಸಿ ಹಾಕಲು ನಮ್ಮ ಬೆಂಬಲವಿದೆ ಎಂದರು.ಬಳಿಕ ಸ್ಥಳೀಯರ ವಿರೋಧದ ನಡುವೆ ಕೊಳವೆ ಬಾವಿ ಹಾಕಲು ಬಂದವರನ್ನು ಹಿಂದಕ್ಕೆ ಕಳುಹಿಸಲಾಯಿತು. ಅಹಿತಕರ ಘಟನೆ ನಡೆಯದಂತೆ ಮುಲ್ಕಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

Edited By : Nagesh Gaonkar
Kshetra Samachara

Kshetra Samachara

28/01/2021 08:19 am

Cinque Terre

15.48 K

Cinque Terre

1

ಸಂಬಂಧಿತ ಸುದ್ದಿ