ಮಂಗಳೂರು: ಮಂಗಳೂರು ನಗರದಲ್ಲಿ ನಡೆದ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ಉಳ್ಳಾಲದ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಮಹಿಳೆ ಮತ್ತು ಆಕೆಯ ಸ್ನೇಹಿತ ಪಕ್ಕದ ಮನೆಯ ವ್ಯಕ್ತಿಯೊಬ್ಬರನ್ನು ಪಾರ್ಟಿಯ ನೆಪದಲ್ಲಿ ಮದ್ಯದ ಜತೆ ಅಮಲು ಪದಾರ್ಥ ಬೆರೆಸಿ ಕುಡಿಸಿ ಅವರನ್ನು ವಿವಸ್ತ್ರಗೊಳಿಸಿದ್ದರು.
ಇದರ ವೀಡಿಯೋ ಮಾಡಿ ಮನೆಯಿಂದ 2.15 ಲಕ್ಷ ರೂ. ಹಾಗೂ ಉಂಗುರವನ್ನು ಕಳವು ಮಾಡಿದ್ದರು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದರನ್ವಯ ಪೊಲೀಸರು ಅಝ್ವೀನ್ ಸಿ. ಹಾಗೂ ಬೈಕಂಪಾಡಿ ಜೋಕಟ್ಟೆಯ ಕೆಬಿಎಸ್ ಬೊಟ್ಟು ಹೌಸ್ ನಿವಾಸಿ ಹತೀಜಮ್ಮ ಅಲಿಯಾಸ್ ಸಫ್ನಾ ಎಂಬವರನ್ನು ಬಂಧಿಸಿದ್ದಾರೆ.
Kshetra Samachara
28/07/2021 07:15 pm