ಮಂಗಳೂರು: ಅಪ್ರಾಪ್ತೆ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪದಡಿಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಬಂಧಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರು ನಗರದ ಪೊಲೀಸ್ ಠಾಣೆಗೆ ಪ್ರಕರಣವೊಂದಕ್ಕೆ ಸಂಬಂಧಿಸಿ ಪೋಷಕರ ಜತೆ ದೂರು ನೀಡಲು ಬಂದಿದ್ದ ಬಾಲಕಿಯ ಮೊಬೈಲ್ ಸಂಖ್ಯೆಯನ್ನು ಪಡೆದ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ದರ್ಜೆಯ ಸಿಬ್ಬಂದಿ ಆಕೆಗೆ ಕರೆ ಮಾಡಿ ಮೆಸೇಜ್ ಕಳುಹಿಸಿ ಅನುಚಿತವಾಗಿ ವರ್ತಿಸಿರುವ ಬಗ್ಗೆ ಮಕ್ಕಳ ಕಲ್ಯಾಣ ಸಮಿತಿ ಮೂಲಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸಾಕಷ್ಟು ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಸಿಬ್ಬಂದಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.
Kshetra Samachara
28/07/2021 07:17 pm