ಮಂಗಳೂರು: ಅಫ್ಘಾನಿಸ್ತಾನವು ತಾಲಿಬಾನಿಗಳ ವಶವಾಗಿದ್ದು, ಇದು ಭಾರತದಲ್ಲಿರುವ ಅಪ್ಘಾನಿ ಪ್ರಜೆಗಳಲ್ಲಿಯೂ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ವಿವಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಅಪ್ಘಾನಿಸ್ತಾನದ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳು ಇಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಅವರನ್ನು ಭೇಟಿ ಮಾಡಿ ಆತಂಕ ವ್ಯಕ್ತಪಡಿಸಿದ್ದಾರೆ.
ಈ ವಿಚಾರವನ್ನು ಸ್ವತಃ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಅವರೇ ಟ್ವಿಟ್ ಮಾಡಿದ್ದು, "ಅಪ್ಘಾನಿಸ್ತಾನದಲ್ಲಿನ ಬೆಳವಣಿಗೆ ಹಿನ್ನೆಲೆಯಲ್ಲಿ ಅಪ್ಘಾನಿಸ್ತಾನಿ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳು ನನ್ನ ಕಚೇರಿಗೆ ಭೇಟಿ ನೀಡಿದ್ದಾರೆ" ಎಂದು ತಿಳಿಸಿದ್ದಾರೆ. ಅಲ್ಲದೆ ಮಂಗಳೂರಿನಲ್ಲಿರುವ ಅಪ್ಘಾನಿಸ್ತಾನದ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಟ್ವೀಟ್ ಮೂಲಕ ಭರವಸೆ ನೀಡಿದ್ದಾರೆ.
Kshetra Samachara
19/08/2021 10:28 pm