ಮಂಗಳೂರು:ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರದ ಉಳಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕು. ಅಲ್ಲದೇಅವರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಹಾಗೂ ಮಹಿಳೆಯರಿಗೆ ರಕ್ಷಣೆಯನ್ನು ನೀಡಬೇಕೆಂದು ಸರಕಾರವನ್ನು ಒತ್ತಾಯಿಸಿ ವಿಶ್ವಹಿಂದು ಪರಿಷತ್ ದುರ್ಗಾವಾಹಿನಿ ಮಂಗಳೂರು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಮಂಗಳೂರಿನ ಕದ್ರಿ ಮಲ್ಲಿಕಟ್ಟೆ ವೃತ್ತದ ಬಳಿ ಪ್ಲೆಕಾರ್ಡ್ ಹಿಡಿದು ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ. ಹೆಣ್ಣುಮಕ್ಕಳಿಗೆ ರಕ್ಷಣೆ ನೀಡಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು
Kshetra Samachara
31/08/2021 12:58 pm