ಉಡುಪಿ: ಉಡುಪಿ ಬಾರ್ ಅಸೋಸಿಯೇಷನ್ ನಲ್ಲಿ ಹಲವು ವರ್ಷಗಳ ನಂತರ ಹಿರಿಯ ವಕೀಲರಾದ ಬಿ. ನಾಗರಾಜ್ ಹೊಸ ಇತಿಹಾಸ ನಿರ್ಮಾಣ ಮಾಡಿದ್ದಾರೆ. ನಿನ್ನೆ ನಡೆದ ಬಾರ್ ಅಸೋಸಿಯೇಷನ್ ನ ಅಧ್ಯಕ್ಷರ ಚುನಾವಣೆಯಲ್ಲಿ ಬಿ.ನಾಗರಾಜ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉತ್ತಮ ಸಂಘಟಕರೂ ಉತ್ತಮ ವಕೀಲರೂ ಆದ ಬ್ರಹ್ಮಾವರದ ಬಿ. ನಾಗರಾಜ್ ಇನ್ನು ಎರಡು ವರ್ಷಗಳ ಮಟ್ಟಿಗೆ ಉಡುಪಿ ಬಾರ್ ಅಸೋಸಿಯೇಷನ್ ನ ಸಾರಥ್ಯ ವಹಿಸಿಕೊಂಡಿದ್ದಾರೆ.ಈ ಕುರಿತು ಪಬ್ಲಿಕ್ ನೆಕ್ಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ಅವರು, ಮೊದಲನೆಯದಾಗಿ ಅಧ್ಯಕ್ಷನಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ನನ್ನ ಜೊತೆಯಲ್ಲಿ ಉತ್ತಮ ತಂಡವಿದೆ. ಎಲ್ಲರನ್ನೂ ಒಂದುಗೂಡಿಸಿ ಬಾರ್ ಅಸೋಸಿಯೇಶನ್ ನ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಮುಖ್ಯವಾಗಿ ಕೊರೋನಾದಿಂದಾಗಿ ಅತಿ ಹೆಚ್ಚು ಸಂಕಷ್ಟಕ್ಕೆ ಒಳಗಾದವರು ಜೂನಿಯರ್ ವಕೀಲರುಗಳು. ಅವರನ್ನು ಸಂಕಷ್ಟದಿಂದ ಪಾರು ಮಾಡಬೇಕಾದ ಸವಾಲು ನನ್ನ ಮುಂದಿದೆ.ಜೊತೆಗೆ ನ್ಯಾಯಾಂಗ ವ್ಯವಸ್ಥೆ ಮತ್ತು ವಕೀಲರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ.ರಥದ ಎರಡು ಗಾಲಿಗಳಿದ್ದ ಹಾಗೆ. ಎರಡನ್ನೂ ಕೂಡ ಸರಿದೂಗಿಸಿಕೊಂಡು ಹೋಗಬೇಕಾದ ಜವಾಬ್ದಾರಿ ನನ್ನ ಮೇಲೆ ಇದೆ. ನ್ಯಾಯಾಧೀಶರುಗಳು ಮತ್ತು ವಕೀಲರುಗಳು ಉತ್ತಮವಾಗಿ ಜೊತೆಯಾಗಿ ಕಾರ್ಯನಿರ್ವಹಿಸುವುದು ಸಮಾಜದ ದೃಷ್ಟಿಯಿಂದಲೂ ಒಳ್ಳೆಯದು. ಈ ನಿಟ್ಟಿನಲ್ಲಿ ನನ್ನ ಕೈಲಾಗುವ ಉತ್ತಮ ಕೆಲಸವನ್ನು ತಂಡದ ಸಹಕಾರದಿಂದ ನಾನು ಮಾಡುತ್ತೇನೆ ಎಂದು ಹೇಳಿದ್ದಾರೆ.
Kshetra Samachara
18/09/2021 03:21 pm