ಉಡುಪಿ: 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಚರಣೆಯ ಪ್ರಯುಕ್ತ ಉಡುಪಿಯಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಈ ಸರಣಿ ಕಾರ್ಯಕ್ರಮವು 02-10-2021 ರಿಂದ 14-11-2021ರವರೆಗೆ ನಿರಂತರವಾಗಿ ನಡೆಯಲಿದೆ.ಅಕ್ಟೋಬರ್ ಎರಡರಂದು ಗಾಂಧಿ ಜಯಂತಿಯಂದು ಉಡುಪಿಯ ಉದ್ಯಾವರದಲ್ಲಿ ಸರಣಿ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಲಿದೆ ಎಂದು ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಶಿಕ್ಷಣ ಇಲಾಖೆ, ಕಾನೂನು ವಿಶ್ವವಿದ್ಯಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ,ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಮತ್ತು ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಂಯುಕ್ತ ಅಶ್ರಯದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ.ಮುಖ್ಯವಾಗಿ ಜನರಿಗೆ ಕಾನೂನಿನ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲೆಯಾದ್ಯಂತ ಪ್ರತಿದಿನ ಒಂದೊಂದು ವಿಷಯಕ್ಕೆ ಸಂಬಂಧಿಸಿ ಕಾರ್ಯಕ್ರಮ ನಡೆಯಲಿದೆ.ಗಾಂಧಿ ಜಯಂತಿ ದಿನ ಲೋಕ ಅದಾಲತ್ ನ ಪ್ರಯೋಜನಗಳು ಎಂಬ ವಿಷಯದಲ್ಲಿ ಜನರಿಗೆ ಮಾಹಿತಿ ನೀಡಲಾಗುತ್ತಿದೆ.
ಈ ಕಾರ್ಯಕ್ರಮಗಳ ಸದುಪಯೋಗಪಡಿಸುವಂತೆ ಶರ್ಮಿಳಾ ಹೇಳಿದ್ದಾರೆ.ಇದೇ ಸಂದರ್ಭ ಉತ್ತಮವಾಗಿ ಮೂಡಿಬರುತ್ತಿರುವ ಪಬ್ಲಿಕ್ ನೆಕ್ಸ್ಟ್ ಗೆ ಅವರು ಶುಭ ಹಾರೈಸಿದ್ದಾರೆ.
Kshetra Samachara
27/09/2021 05:08 pm