ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: 'ದುರ್ಗಾ ದೌಡ್' ವಿರುದ್ಧ ಕಾನೂನು ಚೌಕಟ್ಟಿನಲ್ಲೇ ಕ್ರಮ; ಜಿಲ್ಲಾಧಿಕಾರಿ

ಉಡುಪಿ: ಉಡುಪಿಯಲ್ಲಿ ನಡೆದಿದ್ದ 'ದುರ್ಗಾ ದೌಡ್' ಆಯೋಜಕರ ವಿರುದ್ಧ ಕಾನೂನು ರೀತಿಯಲ್ಲಿಯೇ ಕ್ರಮ ಆಗಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದ್ದಾರೆ.

ದುರ್ಗಾ ದೌಡ್ ಕಾರ್ಯಕ್ರಮ ಸಂಬಂಧ ಈಗಾಗಲೇ ದೂರು ದಾಖಲಾಗಿದೆ. ಕಾನೂನು ಪ್ರಕಾರವೇ ತನಿಖೆ ನಡೆಯಲಿದೆ. ಅದಕ್ಕೆ ಆದರದ್ದೇ ಆದ ಪ್ರೊಸಿಜರ್ ಇದೆ ಎಂದರು. ಅನುಮತಿ ಇಲ್ಲದ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರೇ ಭಾಗವಹಿಸಿದ್ದಾರಲ್ವ ಎಂಬ ಪ್ರಶ್ನೆಗೆ ಉತ್ತರಿಸಿದ ಡಿ.ಸಿ., ದೂರು ದಾಖಲಾದ ಮೇಲೆ ಕಾನೂನು ರೀತಿಯಲ್ಲಿ ಸೂಕ್ತ ಕ್ರಮ‌ ಕೈಗೊಳ್ಳುತ್ತೇವೆ ಎಂದು ಹೇಳಿ ನುಣುಚಿಕೊಂಡರು.

ಉಳಿದಂತೆ ಜಿಲ್ಲೆಯಲ್ಲಿ ಮಾಸ್ಕ್ ಕಡ್ಡಾಯವಾಗಿದ್ದು, ಮಾಸ್ಕ್ ಹಾಕದವರಿಗೆ ದಂಡ ವಿಧಿಸುವ ಕಾರ್ಯ ಮುಂದುವರೆದಿದೆ. ಜನರು ಜಾಗೃತರಾಗಿರುವುದರ ಜೊತೆಗೆ ಧೈರ್ಯವಾಗಿರಬೇಕು ಎಂದು ಹೇಳಿದರು.

Edited By : Shivu K
Kshetra Samachara

Kshetra Samachara

21/10/2021 12:52 pm

Cinque Terre

7.03 K

Cinque Terre

0