ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಚಂದು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ನಡೆಯಿತು.
ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಪೋಲಿಸ್ ಹುತಾತ್ಮ ಸ್ಮಾರಕಕ್ಕೆ ಗೌರವ ವಂದನೆ ಸಲ್ಲಿಸಿದರು.ಈ ವೇಳೆ ಮಾತನಾಡಿದ ಡಿ.ಸಿ, ಯಾವುದೇ ಅಸಾಧಾರಣ ಸನ್ನಿವೇಶದಲ್ಲೂ ಸಹ ವಿಶೇಷ ಸೇವೆ ಸಲ್ಲಿಸುವ ಪೊಲೀಸರು, ತುರ್ತು ಪರಿಸ್ಥಿತಿ, ಕ್ಲಿಷ್ಟಕರ ಪರಿಸ್ಥಿತಿ,ಪ್ರಾಕೃತಿಕ ವಿಕೋಪ ಪರಿಸ್ಥಿತಿಯಲ್ಲೂ ಸಹ ಎದೆಗುಂದದೇ ಕಾರ್ಯ ನಿರ್ವಹಿಸುತ್ತಾರೆ.
ಅಂತಹ ಪೊಲೀಸರ ಕೆಲಸವನ್ನು ಶ್ಲಾಘಿಸಲೇಬೇಕು ಎಂದರು. ಹುತಾತ್ಮ ಪೊಲೀಸರ ಗೌರವಾರ್ಥ 3 ಸುತ್ತು ಗಾಳಿಯಲ್ಲಿ ಗುಂಡು ಹಾರಿಸಲಾಯಿತು.ಬಳಿಕ ಎರಡು ನಿಮಿಷಗಳ ಮೌನಾಚರಣೆ ನಡೆಯಿತು.ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
Kshetra Samachara
21/10/2021 01:06 pm