ಕೊಲ್ಲೂರು: ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಾಲಯದ ನಿರ್ವಹಣಾ ಸಮಿತಿ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಅವರ ನೇಮಕವನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ. ನ್ಯಾ. ಕೃಷ್ಣ ಎಸ್. ದೀಕ್ಷಿತ್ ಏ.26, 2021ರ ಪ್ರಕ್ರಿಯೆ ರದ್ದುಗೊಳಿಸಿದ್ದಾರೆ. ಈ ಪ್ರಕ್ರಿಯೆ ಮೂಲಕ ಶೆಟ್ಟಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.
ಉಡುಪಿ ಜಿಲ್ಲೆಯ ಗೋಪಾಲಕೃಷ್ಣ ಹಾಗೂ ಮೂವರು ಚಂದ್ರಶೇಖರ ಶೆಟ್ಟಿ ಅವರ ಆಯ್ಕೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಗಣೇಶ್ ಕಿಣಿ ಹಾಗೂ ಚಂದ್ರಶೇಖರ ಶೆಟ್ಟಿ ಮಾ.24 ಹಾಗೂ ಏಪ್ರಿಲ್ 15, 2021 ರಲ್ಲಿ ಸಮಿತಿ ಸದಸ್ಯರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಹೊರತಾಗಿಯೂ ಅವರನ್ನು ಹಾಲಿ ಸಮಿತಿ ಸದಸ್ಯರೆಂದು ಪರಿಗಣಿಸಿ ಏ.26 ರಂದು ನಡೆದ ಸಭೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದ್ದು, ಈ ಸಭೆಯಲ್ಲಿ ಶೆಟ್ಟಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಲಾಗಿತ್ತು.
ಸಮಿತಿ ಸದಸ್ಯರೇ ಅಲ್ಲದವರು ಸಭೆಯಲ್ಲಿ ಭಾಗವಹಿಸಲು ಸಾಧ್ಯವಿಲ್ಲ. ಆದ್ದರಿಂದ ಸಮಿತಿಯ ಸದಸ್ಯರಲ್ಲದೇ ಇದ್ದವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವಂತಿಲ್ಲ ಎಂದು ಕೋರ್ಟ್ ಹೇಳಿದೆ.
Kshetra Samachara
18/11/2021 02:56 pm