ಕಾರ್ಕಳ: ಕಾರ್ಕಳದ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ರೋಟರಿ ಕ್ಲಬ್ ಕಾರ್ಕಳ ರೋಟ್ರಾಕ್ಟ್ ಕ್ಲಬ್ ಕಾರ್ಕಳ ಮತ್ತು ಕಾರ್ಕಳ ನಗರ ಠಾಣಾ ಪೊಲೀಸರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಅಪರಾಧ ತಡೆ ಮಾಸಾಚರಣೆ ನಡೆಯಿತು.
ಇದರ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾನೂನಿನ ಬಗ್ಗೆ ಮಾಹಿತಿ ಹಾಗೂ ಅಪರಾಧ ತಡೆಯುವಲ್ಲಿ ಹಾಗು ಅಪರಾಧ ಪತ್ತೆ ಹಚ್ಚುವಲ್ಲಿ ವಿದ್ಯಾರ್ಥಿಗಳ ಹಾಗು ಸಾರ್ವಜನಿಕರ ಪಾತ್ರದ ಬಗ್ಗೆ ಕಾರ್ಕಳ ಪೊಲೀಸ್ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ವಿಜಯಪ್ರಸಾದ್ ರವರು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕರಾದ ಸಂಪತ್ ಕುಮಾರ್, ಕಾರ್ಕಳ ನಗರ ಪೊಲೀಸ್ ಠಾಣಾ ಕಾನೂನು ಸುವ್ಯವಸ್ಥೆಯ PSI ಮಧು ಬಿ ಇ ಮತ್ತು ಕಾರ್ಕಳ ರೋಟರಿ ಕ್ಲಬ್ ನ ಅಧ್ಯಕ್ಷರಾದ ಸುರೇಶ್ ನಾಯಕ್, ಕಾರ್ಯದರ್ಶಿಯಾಗಿರುವ ಇಕ್ಬಾಲ್ ಅಹಮದ್ ಹಾಗು ಕಾಲೇಜಿನ ಪ್ರಿನ್ಸಿಪಾಲರಾದ ಶ್ರೀವರ್ಮ ಅಜ್ರಿ ಹಾಗೂ ಪ್ರಾಧ್ಯಪಕ ವೃಂದದವರು ಮತ್ತು ಕಾಲೇಜಿನ ವಿಧ್ಯಾರ್ಥಿಗಳು ಹಾಜರಿದ್ದರು.
Kshetra Samachara
14/12/2021 08:20 pm