ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಪುತ್ತೂರು ಉಪವಿಭಾಗೀಯ ವ್ಯಾಪ್ತಿಯಲ್ಲಿ 144ನೇ ಸೆಕ್ಷನ್ ಜಾರಿ ಮಾಡಲಾಗಿದೆ.
ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಆದೇಶ ಹೊರಡಿಸಿದ್ದಾರೆ.
ಡಿ.15ರಿಂದ ಡಿ.17ರ ಮಧ್ಯರಾತ್ರಿ 12 ಗಂಟೆ ವರೆಗೆ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಲಾಗಿದೆ. ಈ ವೇಳೆ
ಯಾವುದೇ ಪ್ರತಿಭಟನೆ, ಮೆರವಣಿಗೆ, ಸಾರ್ವಜನಿಕ ಸಭೆ ನಡೆಸದಂತೆ ಸೂಚನೆ ನೀಡಲಾಗಿದೆ.
5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನೂ ನಿಷೇಧಿಸಲಾಗಿದೆ. ಉಪ್ಪಿನಂಗಡಿಯಲ್ಲಿ ನಿನ್ನೆ ನಡೆದ
ಪಿಎಫ್ಐ ಕಾರ್ಯಕರ್ತರ ಪ್ರತಿಭಟನೆ ವೇಳೆ ನಡೆದಿದ್ದ ಲಾಠಿಚಾರ್ಜ್ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
Kshetra Samachara
15/12/2021 04:19 pm