ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪೊಲೀಸರಿಂದ ಲಾಠಿಚಾರ್ಜ್ ಪ್ರಕರಣ: ಪಿಎಫ್ ಐನಿಂದ ಪ್ರತಿಭಟನೆ

ಉಡುಪಿ: ಪಾಪ್ಯುಲರ್ ಫ್ರಂಟ್ ನಾಯಕರ ಅಕ್ರಮ ಬಂಧನ ಖಂಡಿಸಿ ಶಾಂತಿಯುತ ಪ್ರತಿಭಟನೆ ನಡೆಸಿದವರ ಮೇಲೆ ಉಪ್ಪಿನಂಗಡಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಪಿಎಫ್ ಐ ಪ್ರತಿಭಟನೆ ನಡೆಸಿತು. ಪಾಪ್ಯುಲರ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿಯಿಂದ ಅಜ್ಜರಕಾಡು ಸೈನಿಕರ ಸ್ಮಾರಕದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ಅಕ್ರಮ ಬಂಧನದಲ್ಲಿರುವ ನಾಯಕರನ್ನು ತಕ್ಷಣ ಬಿಡುಗಡೆಗೊಳಿಸಬೇಕು ಹಾಗೂ ತಪ್ಪಿತಸ್ಥ ಪೊಲೀಸರ ಮೇಲೆ ಕ್ರಮಕೈಗೊಳ್ಳಬೇಕೆಂದು ಈ ವೇಳೆ ಪ್ರತಿಭಟನಕಾರರು ಆಗ್ರಹಿಸಿದರು.

ಸಭೆಯಲ್ಲಿ ಪಾಪ್ಯುಲರ್ ಫ್ರಂಟ್ ಉಡುಪಿ ಜಿಲ್ಲಾಧ್ಯಕ್ಷರಾದ ಫಯಾಜ್ ಅಹ್ಮದ್ ,SDPI ಜಿಲ್ಲಾ ಉಪಾಧ್ಯಕ್ಷ ಶಾಹಿದ್ ಅಲಿ, APCL ಉಡುಪಿ ಜಿಲ್ಲಾಧ್ಯಕ್ಷರಾದ ಹುಸೇನ್ ಕೋಡಿಬೆಂಗ್ರೆ, ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ ಉಡುಪಿ ಜಿಲ್ಲಾ ಸಮಿತಿ ಸದಸ್ಯರಾದ ಮೌಲಾನ ಜಾವೇದ್ ಖಾಸಿಮಿ ಅಥಿತಿಗಳಾಗಿ ಬಾಗವಸಿಸಿ ಮಾತನಾಡಿದರು.

ಪಾಪ್ಯುಲರ್ ಫ್ರಂಟ್ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಶುಕೂರ್ ಮಲ್ಪೆ, SDPI ಉಡುಪಿ ಜಿಲ್ಲಾಧ್ಯಕ್ಷರಾದ ನಜೀರ್ ಅಹಮದ್ ಉಪಸ್ಥಿತರಿದ್ದರು. ಶಫೀಕ್ ಕಾರ್ಯಕ್ರಮ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

16/12/2021 11:36 am

Cinque Terre

23.22 K

Cinque Terre

3

ಸಂಬಂಧಿತ ಸುದ್ದಿ