ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ 3074 ಪ್ರಕರಣಗಳ ಇತ್ಯರ್ಥ!

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತನ್ನು ಇಂದು ಆಯೋಜಿಸಲಾಯಿತು. ಒಂದೇ ದಿನ ಒಟ್ಟು ದಾಖಲೆಯ 3074 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಯಿತು.

ಈ ಪೈಕಿ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣ -31, ಚೆಕ್ಕು ಅಮಾನ್ಯ ಪ್ರಕರಣ-195, ಬ್ಯಾಂಕ್ / ಹಣ ವಸೂಲಾತಿ ಪ್ರಕರಣ-17, ಎಂ.ವಿ.ಸಿ ಪ್ರಕರಣ-136, ವಿದ್ಯುತ್ ಶುಲ್ಕಕ್ಕೆ ಸಂಬಂಧಪಟ್ಟ ಪ್ರಕರಣ-2, ಎಂ.ಎಂಆರ್‌.ಡಿ ಆಕ್ಟ್ ಪ್ರಕರಣ-9, ವೈವಾಹಿಕ ಪ್ರಕರಣ-2, ಸಿವಿಲ್ ಪ್ರಕರಣ-169, ಇತರೇ ಕ್ರಿಮಿನಲ್ ಪ್ರಕರಣ2268 ಹಾಗೂ ವ್ಯಾಜ್ಯ ಪೂರ್ವ ದಾವೆ-245 ಹೀಗೆ ರಾಜೀ ಮುಖಾಂತರ ಇತ್ಯರ್ಥಪಡಿಸಿ 11,18,81,206/-ರೂ. ಪರಿಹಾರದ ಮೊತ್ತವನ್ನು ಘೋಷಿಸಲಾಯಿತು.

ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ ವಕೀಲರ ಸಂಘ, ಉಡುಪಿ, ಕುಂದಾಪುರ ಹಾಗೂ ಕಾರ್ಕಳ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬ್ಯಾಂಕ್, ಕಕ್ಷಿಗಾರರು ಹಾಗೂ ಇತರ ಸರ್ಕಾರಿ ಇಲಾಖೆಯ ಸಹಕಾರದೊಂದಿಗೆ ಲೋಕ್ ಅದಾಲತ್ ಯಶಸ್ವಿಯಾಯಿತು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

18/12/2021 09:56 pm

Cinque Terre

16.93 K

Cinque Terre

0