ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಉದ್ಯೋಗ ಖಾತ್ರಿ ಕೂಲಿ ಬಾಕಿ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಕುಂದಾಪುರ: ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನರೇಗಾ ಕೂಲಿಕಾರರು ಕುಂದಾಪುರ ತಾಲೂಕು ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ಮುಖಂಡರು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಜಾರಿ ಮಾಡಬೇಕು. ನರೇಗಾ ಕೂಲಿ ಕಾರ್ಮಿಕರಿಗೆ ಕೆಲಸದ ವೇತನ ಬಾಕಿ ಹಣವನ್ನು ಬಿಡುಗಡೆಗೊಳಿಸಬೇಕು. ಕೂಲಿಕಾರರಿಗೆ ದಿನ ಒಂದರ 600ರೂ. ವೇತನ ಹಾಗೂ ಎಷ್ಟು ದಿನ ಕೆಲಸ ಬಯಸಿ ಅರ್ಜಿ ಸಲ್ಲಿಸುತ್ತಾರೋ ಆಷ್ಟು ದಿನ ಅವರಿಗೆ ಕೆಲಸ ಒದಗಿಸಬೇಕು ಎಂದು ಒತ್ತಾಯಿಸಿದರು.

ಸಿಐಟಿಯು ಜಿಲ್ಲಾ ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಎಚ್.ನರಸಿಂಹ. ಮಾತನಾಡಿದರು. ತಾಪಂ ಕಾರ್ಯನಿರ್ವಾಹಕಾಧಿಕಾರಿ ಶ್ವೇತ ಎನ್. ಅವರ ಮೂಲಕ ಮುಖ್ಯಮಂತ್ರಿಗಳಿಗೆ ಸಾಮೂಹಿಕ ಮನವಿ ಸಲ್ಲಿಸಲಾಯಿತು. ಮುಖಂಡರಾದ ಬಸ್ರೂರು ಗ್ರಾಪಂ ಸದಸ್ಯೆ ಕಮಲ ಸೆಟ್ಟಿಗಾರ, ಶ್ಯಾಮಲ ಗುಜ್ಜಾಡಿ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಜಿಲ್ಲಾ ಕಾರ್ಯದರ್ಶಿ ನಾಗರತ್ನ ನಾಡ ಕಾರ್ಯಕ್ರಮ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

23/12/2021 08:19 pm

Cinque Terre

7.5 K

Cinque Terre

0