ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ವ್ಯಾಜ್ಯಗಳಿರುವ ಮನೆ ಶಾಪಗ್ರಸ್ತ ಮನೆಯಂತೆ; ನ್ಯಾಯಮೂರ್ತಿ ಅಬ್ದುಲ್ ನಜೀರ್

ಪುತ್ತೂರು: ʼವ್ಯಾಜ್ಯಗಳಿರುವ ಮನೆ ಶಾಪಗ್ರಸ್ತ ಮನೆಯಂತೆ, ವ್ಯಾಜ್ಯಗಳು ಸಮಾಜಕ್ಕೆ ಅಂಟಿಕೊಂಡ ಕ್ಯಾನ್ಸರ್ʼ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅಭಿಪ್ರಾಯಪಟ್ಟರು.

ಪುತ್ತೂರಿನಲ್ಲಿ ಇಂದು ಪುತ್ತೂರು ವಕೀಲರ ಭವನದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಕ್ಯಾನ್ಸರ್ ನಂತೆ ಸಮಾಜದಲ್ಲಿ ಹರಡಿರುವ ವ್ಯಾಜ್ಯಗಳೆಂಬ ಈ ರೋಗ ನಿವಾರಿಸಲು ನ್ಯಾಯಾಂಗ ವ್ಯವಸ್ಥೆಗೆ ಹೆಚ್ಚಿನ ಮೂಲಭೂತ ಸೌಲಭ್ಯ ಕಲ್ಪಿಸುವ ಅಗತ್ಯವಿದೆ ಎಂದರು.

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಲ್ಪಿಸೋದು ಸರಕಾರದ ಮುಖ್ಯ ಕರ್ತವ್ಯವಾಗಿದ್ದು, ಈ ಜವಾಬ್ದಾರಿ ನ್ಯಾಯಾಂಗದ ಮೇಲೂ ಇದೆ ಎಂದರು. ನ್ಯಾಯಾಂಗ ವ್ಯವಸ್ಥೆಗೆ ಕಾಲಕ್ಕೆ ತಕ್ಕಂತೆ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ನ್ಯಾಯಾಂಗ ಮೂಲಭೂತ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತು ಚರ್ಚೆಯಲ್ಲಿದ್ದು, ಇದು ಆರಂಭಗೊಂಡಲ್ಲಿ ನ್ಯಾಯಾಂಗ ವ್ಯವಸ್ಥೆಗೆ ಇದು ಪೂರಕ ಎಂದು ಹೇಳಿದರು.

Edited By : Nagesh Gaonkar
PublicNext

PublicNext

28/12/2021 05:34 pm

Cinque Terre

8.22 K

Cinque Terre

0

ಸಂಬಂಧಿತ ಸುದ್ದಿ