ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಕೋಟದಲ್ಲಿ ಪೊಲೀಸ್ ದೌರ್ಜನ್ಯ ಪ್ರಕರಣ: ಎಸ್ಸೈ ಸಸ್ಪೆಂಡ್ ,ಐವರು ಪೊಲೀಸರ ಎತ್ತಂಗಡಿ

ಉಡುಪಿ:ಮೊನ್ನೆ ರಾತ್ರಿ ಉಡುಪಿ ಜಿಲ್ಲೆಯ ಕೋಟತಟ್ಟು ಕೊರಗ ಕಾಲೋನಿಯ ಮೆಹೆಂದಿ ಕಾರ್ಯಕ್ರಮಕ್ಕೆ‌ ನುಗ್ಗಿ‌ ಕೊರಗ ಸಮುದಾಯದವರ ಮೇಲೆ ಲಾಠಿಯಲ್ಲಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆ ಪಿಎಸ್ಐ ಸಂತೋಷ್ ಬಿ.ಪಿ‌ ಅವರನ್ನು ಸಸ್ಪೆಂಡ್ ಮಾಡಲಾಗಿದ್ದು,ಉಳಿದ ಐವರನ್ನು ಎತ್ತಂಗಡಿ ಮಾಡಲಾಗಿದೆ.

ಈ‌ ಕುರಿತು ಇಂದು ಮಾಹಿತಿ ನೀಡಿರುವ ಉಡುಪಿ ಎಸ್ಪಿ ವಿಷ್ಣುವರ್ಧನ್, ಕೋಟದಲ್ಲಿ ನಡೆದ ಕೊರಗ ಸಮುದಾಯದವರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಆಧಾರದಲ್ಲಿ ಕೋಟ ಪಿಎಸ್ಐ ಅವರನ್ನು ಪಶ್ಚಿಮ ವಲಯ ಐಜಿಪಿಯವರು ಅಮಾನತು ಮಾಡಿದ್ದಾರೆ. ಇನ್ನು ಪ್ರಕರಣದ ಉಳಿದ ಐದು ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಕೋಟ ಪೊಲೀಸ್ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.

Edited By :
Kshetra Samachara

Kshetra Samachara

29/12/2021 09:38 am

Cinque Terre

8.46 K

Cinque Terre

8