ಮಂಗಳೂರು: ನಗರದ ಮಹಿಳಾ ಪೊಲೀಸ್ ಠಾಣೆಯ ಆರು ಮಂದಿ ಮಹಿಳಾ ಪೊಲೀಸರು ಸಸ್ಪೆಂಡ್ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಹೇಳಿದ್ದಾರೆ.
ಪೊಕ್ಸೊ ಪ್ರಕರಣವೊಂದರಲ್ಲಿ ಸರಿಯಾಗಿ ತನಿಖೆ ಮಾಡದೆ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಇರುವ ಹಿನ್ನೆಲೆಯಲ್ಲಿ ಮಹಿಳಾ ಪಿಎಸ್ಐ ಅಮಾನತು ಮಾಡಲಾಗಿದೆ. ಅಲ್ಲದೆ ಈ ಹಿಂದೆ ಮಹಿಳಾ ಠಾಣಾ ಸಿಬ್ಬಂದಿ ಪೊಲೀಸ್ ಠಾಣೆಯೊಳಗಡೆ ಮದ್ಯ ಪಾರ್ಟಿ ಮಾಡಿರುವ ಹಿನ್ನೆಲೆಯಲ್ಲಿ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಮದ್ಯ ಪಾರ್ಟಿ ಮಾಡಿರುವುದಕ್ಕೆ ಸಿಸಿಟಿವಿ ದಾಖಲೆಯಿದ್ದು, ಈ ಬಗ್ಗೆ ಸಿಸಿಪಿ, ಡಿಸಿಪಿ ತನಿಖೆ ನಡೆಸಿದ್ದಾರೆ. ಈ ಮೂಲಕ ಅವರ ಮೇಲಿನ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಹಿಳಾ ಪೊಲೀಸ್ ಠಾಣೆಯ ಇಬ್ಬರು ಎಎಸ್ಐ, ಇಬ್ಬರು ಹೆಡ್ ಕಾನ್ ಸ್ಟೇಬಲ್ ಹಾಗೂ ಓರ್ವರು ಕಾನ್ ಸ್ಟೇಬಲ್ ಅಮಾನತು ಆಗಿದ್ದಾರೆ ಎಂದು ಶಶಿಕುಮಾರ್ ಎನ್. ತಿಳಿಸಿದ್ದಾರೆ.
PublicNext
05/01/2022 09:56 pm