ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪರ್ಯಾಯಕ್ಕೆ ಬಿಗಿ ಭದ್ರತೆ; ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಉಡುಪಿ: ಪರ್ಯಾಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ನೇತೃತ್ವದಲ್ಲಿ ಉಡುಪಿ ಶ್ರೀಕೃಷ್ಣ ಮಠ, ರಥಬೀದಿ ಸೇರಿದಂತೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

70ಕ್ಕೂ ಅಧಿಕ ಡಿವೈಎಸ್ಪಿ, ಪೊಲೀಸ್ ನಿರೀಕ್ಷಕರು, ಉಪನಿರೀಕ್ಷಕರು, 60 ಎಎಸ್ಸೈ, 60 ಮಹಿಳಾ ಹೆಡ್‌ಕಾನ್‌ಸ್ಟೇಬಲ್ ಮತ್ತು ಮಹಿಳಾ ಕಾನ್‌ಸ್ಟೇಬಲ್ ಗಳು, 650 ಹೆಡ್‌ಕಾನ್‌ಸ್ಟೇಬಲ್ ಮತ್ತು ಕಾನ್‌ಸ್ಟೇಬಲ್‌ಗಳು, ಏಳು ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಎರಡು ಕೆಎಸ್‌ಆರ್‌ಪಿ, ನಾಲ್ಕು ವಿಧ್ವಂಸಕ ನಿಗ್ರಹ ಪರಿಶೀಲನೆ ತಂಡ ಮತ್ತು ಒಂದು ಕ್ಷಿಪ್ರ ಕಾರ್ಯಪಡೆ ನಿಯೋಜಿಸಲಾಗಿದೆ ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

17/01/2022 05:15 pm

Cinque Terre

7.62 K

Cinque Terre

0

ಸಂಬಂಧಿತ ಸುದ್ದಿ