ಉಡುಪಿ: ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಶಿರವಸ್ತ್ರ ಧರಿಸುವ ವಿವಾದಕ್ಕೆ ಸಂಬಂಧಿಸಿ ವಿದ್ಯಾರ್ಥಿನಿಯೋರ್ವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಭಾರತ ಸಂವಿಧಾನದ 14 ಮತ್ತು 25 ನೇ ವಿಧಿಯನ್ವಯ ವಿದ್ಯಾರ್ಥಿನಿ ಹಿಜಾಬ್ ಧರಿಸುವುದು ಆಕೆಯ ಮೂಲಭೂತ ಹಕ್ಕು ಎಂದು ಘೋಷಿಸುವಂತೆ ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರೇಶಮ್ ಫಾರೂಕ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ವಿದ್ಯಾರ್ಥಿನಿ ಪರ ವಕೀಲರಾದ ಶತಾಬಿಶ್ ಶಿವಣ್ಣ, ಅರ್ನವ್ ಎ ಬಾಗಲವಾಡಿ ಮತ್ತು ಅಭಿಷೇಕ್ ಜನಾರ್ದನ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ವಿದ್ಯಾರ್ಥಿಗಳು ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಲು ಮತ್ತು ಕಾಲೇಜು ಆಡಳಿತದ ಯಾವುದೇ ಹಸ್ತಕ್ಷೇಪವಿಲ್ಲದೆ ಅನುಮತಿ ನೀಡಬೇಕೆಂದು ಕೋರಿದ್ದಾರೆ.
'ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡುವಂತೆ ಕಾಲೇಜಿಗೆ ಮಧ್ಯಂತರ ನಿರ್ದೇಶನ ನೀಡುವಂತೆ ನ್ಯಾಯಾಲಯವನ್ನು ಕೋರುತ್ತೇವೆ'' ಎಂದು ವಿದ್ಯಾರ್ಥಿನಿ ಪರ ವಕೀಲರು ಹೇಳಿದ್ದಾರೆ.
PublicNext
01/02/2022 07:34 am