ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಬೆಳ್ಳಂಬೆಳಗ್ಗೆ ಪೊಲೀಸರಿಂದ ಪಥ ಸಂಚಲನ..

ಮಂಗಳೂರು: ಮಂಗಳೂರು ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಪೊಲೀಸರಿಂದ ಪಥ ಸಂಚಲನ ನಡೆಯಿತು. ಬೆಳಿಗ್ಗೆ 8 ಗಂಟೆಗೆ ಪಥಸಂಚಲನ ಆರಂಭವಾಗಿ ಬಲ್ಲಾಳ್ ಬಾಗ್ ನಿಂದ ಶುರುವಾಗಿ ಪಿ.ವಿ.ಎಸ್ ಸರ್ಕಲ್, ಜ್ಯೋತಿ ಅಂಬೇಡ್ಕರ್, ಸರ್ಕಲ್ ಆಗಿ ಹಂಪನಕಟ್ಟ ಮಾರ್ಗವಾಗಿ ಪೊಲೀಸ್ ಆಯುಕ್ತರ ಕಚೇರಿ ಬಳಿ ಕೊನೆಗೊಂಡಿತು.

ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್‌ ಶಶಿಕುಮಾರ್‌ ನೇತೃತ್ವದಲ್ಲಿ ಪಥಸಂಚಲನ ಆಯೋಜಿಸಲಾಗಿತ್ತು. ಡಿಸಿಪಿ ಹರಿರಾಂ ಶಂಕರ್‌, ಟ್ರಾಫಿಕ್ ಎಸಿಪಿ ನಟರಾಜ್‌ ಸಹಿತ ಹಲವು ಮಂದಿ ಹಿರಿಯ ಪೊಲೀಸ್ ಅಧಿಕಾರಿಗಳು ಪಥ ಸಂಚಲನದಲ್ಲಿ ಪಾಲ್ಗೊಂಡರು.

ಇನ್ನು ಪಥಸಂಚಲನದ ಅರಿವು ಇಲ್ಲದೇ ಮಂಗಳೂರು ನಗರದ ಬಹುತೇಕ ಕಡೆಗಳಲ್ಲಿ ಬೆಳಿಗ್ಗೆ ಟ್ರಾಫಿಕ್‌ ಜಾಮ್ ಉಂಟಾಯಿತು. ಅನೇಕ ಕಡೆಗಳಲ್ಲಿ ಪಥ ಸಂಚಲನದ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಬದಲಾವಣೆ ಕೂಡಾ ಮಾಡಲಾಗಿತ್ತು.

ಕಳೆದ ಕೆಲವು ದಿನಗಳಿಂದ ಕೆಲವು ವಿಷಯಗಳು ಗೊಂದಲ ಮೂಡಿಸುವ ಹಿನ್ನೆಲೆಯಲ್ಲಿ ಅದಕ್ಕೆ ಪೂರಕವಾಗಿ ಜನತೆಯಲ್ಲಿ ಧೈರ್ಯ ತುಂಬುವ ನಿಟ್ಟಿನಲ್ಲಿ ಹಾಗೂ ಶಾಲಾ ಕಾಲೇಜುಗಳು ಪರಿಸರದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಇದನ್ನು ಆಯೋಜಿಸಲಾಗಿತ್ತು.

Edited By : Manjunath H D
Kshetra Samachara

Kshetra Samachara

21/02/2022 02:18 pm

Cinque Terre

13.66 K

Cinque Terre

0