ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ ಮತ್ತು ಪೊಲೀಸರಿಂದ ಪಥಸಂಚಲನ

ಉಡುಪಿ: ಉಡುಪಿಯಲ್ಲಿ ಇವತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ ಮತ್ತು ಪೊಲೀಸರಿಂದ ಪಥಸಂಚಲನ ನಡೆಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಗಾಗಿ ಮತ್ತು ಜನತೆಗೆ ಸಂದೇಶ ನೀಡುವ ಸಲುವಾಗಿ ನಗರದ ಜೋಡುಕಟ್ಟೆಯಿಂದ ಪೊಲೀಸ್ ರೂಟ್ ಮಾರ್ಚ್ ನಡೆಯಿತು.ರೂಟ್ ಮಾರ್ಚ್ ಗೆ ಪೊಲೀಸ್ ವರಿಷ್ಟಾಧಿಕಾರಿ ವಿಷ್ಣುವರ್ಧನ್ ಚಾಲನೆ ನೀಡಿದರು.90 ಮಂದಿ ಕ್ಷಿಪ್ರ ಕಾರ್ಯಾಚರಣೆ ಪಡೆಯ ಸಿಬ್ಬಂದಿ ಮತ್ತು ಇನ್ನೂರಕ್ಕೂ ಅಧಿಕ ಜಿಲ್ಲಾ ಪೊಲೀಸ್ ಸಿಬ್ಬಂದಿಗಳು ನಗರದ ಜೋಡುಕಟ್ಟೆಯಿಂದ ಹೊರಟು ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಯಿತು.

ಶಿವಮೊಗ್ಗ ಗಲಭೆಯ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಎಚ್ಚೆತ್ತ ಪೊಲೀಸ್ ಇಲಾಖೆ ಪಥಸಂಚಲನ ಮೂಲಕ ಜನತೆಗೆ ಧೈರ್ಯ ತುಂಬುವುದರ ಜೊತೆಗೆ ಸಮಾಜ ವಿರೋಧಿ ಶಕ್ತಿಗಳಿಗೆ ಕಠಿಣ ಸಂದೇಶ ರವಾನಿಸಿತು.

Edited By : Manjunath H D
Kshetra Samachara

Kshetra Samachara

23/02/2022 01:44 pm

Cinque Terre

8.93 K

Cinque Terre

0

ಸಂಬಂಧಿತ ಸುದ್ದಿ