ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ

ಉಡುಪಿ: ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ಪ್ರಶಿಕ್ಷಣಾರ್ಥಿಗಳ ಹದಿಮೂರನೇ ತಂಡದ ನಿರ್ಗಮನ ಪಥ ಸಂಚಲನ ಕಾರ್ಯಕ್ರಮ ಚಂದು ಮೈದಾನದಲ್ಲಿ ಇಂದು ನಡೆಯಿತು.

ನೂರು ಮಂದಿ ಪೊಲೀಸ್ ಕಾನ್ಸ್ಟೇಬಲ್ ಗಳು ಉಡುಪಿಯ ಚಂದು ಮೈದಾನದಲ್ಲಿ ತರಬೇತಿ ಪಡೆಯುತ್ತಿದ್ದು ಇಂದು ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ನಡೆಯಿತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಮಣ್ಯ ಜೆ.ಎನ್ ಪ್ರಶಿಕ್ಷಣಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಆಕರ್ಷಕ ಪಥಸಂಚಲನ ನಡೆಯಿತು.

ಈ ಸಂದರ್ಭ ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ ಗೆದ್ದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ. ಜಿಲ್ಲಾ ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್ , ನಾಲ್ವರು ಅಭ್ಯರ್ಥಿಗಳು ಉನ್ನತಮಟ್ಟದ ವ್ಯಾಸಂಗ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅವರು ದೊಡ್ಡ ಹುದ್ದೆಗೆ ಪ್ರಯತ್ನ ಪಡಲಿ. ಈ ಶಿಬಿರಾರ್ಥಿಗಳಲ್ಲಿ ಎಲ್ಲರೂ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿದ್ದು ಇದನ್ನ ಮುಂದೆಯೂ ಉಳಿಸಿಕೊಂಡು ಉನ್ನತ ಹುದ್ದೆಗೆ ಏರುವಂತಾಗಲಿ ಎಂದು ಹಾರೈಸಿದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್ ಟಿ ಸಿದ್ದಲಿಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಎನ್ ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

25/02/2022 01:46 pm

Cinque Terre

13.7 K

Cinque Terre

0

ಸಂಬಂಧಿತ ಸುದ್ದಿ