ಉಡುಪಿ: ಕಳೆದ ರವಿವಾರ ಶ್ರೀಕೃಷ್ಣಮಠದ ಪರಿಸರದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಬಾಲಕನನ್ನು ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಪೊಲೀಸರ ಸಹಕಾರದಿಂದ ರಕ್ಷಿಸಿ, ಮಣಿಪಾಲ ಹೊಸಬೆಳಕು ಆಶ್ರಮಕ್ಕೆ ದಾಖಲಿಸಿದ್ದರು. ಬಳಿಕ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಲಾಗಿತ್ತು.
ಇದೀಗ ರಕ್ಷಿಸಲ್ಪಟ್ಟಿರುವ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳ ವಶಕ್ಕೆ ಒಪ್ಪುಸಲಾಗಿದೆ. ಈ ಸಂದರ್ಭ ಸಿ.ಡಿ.ಪಿ.ಓ ವೀಣಾ ವಿವೇಕಾನಂದ, ಕುಮಾರ ನಾಯ್ಕ್, ರಕ್ಷಣಾಧಿಕಾರಿ, ಫಾದರ್ ದೀಲಾನ್ ಮಕ್ಕಳ ಹಕ್ಕುಗಳ ಆಯೋಗದ ಸಹಾಯವಾಣಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
Kshetra Samachara
09/03/2022 01:09 pm