ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಹಿಜಾಬ್ ವಿವಾದ ನಿಷ್ಪಕ್ಷಪಾತವಾಗಿ ತನಿಖೆ ; ಪೊಲೀಸ್ ಕಮಿಷನರ್

ಮಂಗಳೂರು: ನಗರದ ರಥಬೀದಿ ಡಾ.ಪಿ.ದಯಾನಂದ ಪೈ - ಪಿ.ಸತೀಶ್ ಪೈ ಪ್ರಥಮ ದರ್ಜೆ ಕಾಲೇಜಿನ ಹಿಜಾಬ್ ವಿವಾದ ಪ್ರಕರಣದ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆದು ಶೀಘ್ರವಾಗಿ ಹಾಗೂ ಪಾರದರ್ಶಕವಾಗಿ ತನಿಖೆ ನಡೆಸಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.

ಹಿಜಾಬ್ ವಿವಾದವಾದ ತಕ್ಷಣ ತಾನು ಕಾಲೇಜಿಗೆ ತೆರಳಿದ್ದು, ಆ ಬಳಿಕದ ಕ್ಷಣ ಕ್ಷಣದ ಸಿಸಿಟಿವಿ ಫೂಟೇಜ್ ಅನ್ನು ಪರಿಶೀಲನೆ ನಡೆಸಲಾಗಿದೆ. ಪ್ರಾಧ್ಯಾಪಕ ವೃಂದ, ಪ್ರಾಂಶುಪಾಲರ ಹೇಳಿಕೆ, ಇತರ ಸಾಕ್ಷಿಗಳನ್ನು ತನಿಖೆಗೆ ಸಹಕರಿಸುವಂತೆ ನೋಟಿಸ್ ನೀಡಲಾಗಿದೆ.

ಘಟನೆಯ ಬಗ್ಗೆ ಈಗಾಗಲೇ ಮೂರು ಪ್ರಕರಣ ದಾಖಲಿಸಲಾಗಿದೆ. ಬಂದರು ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ಹಾಗೂ ಸೆನ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ ಎಂದರು.

ಹಿಜಾಬ್ ಗೊಂದಲ ಸೃಷ್ಟಿಸಿ ಪರೀಕ್ಷೆ ಬರೆಯಲು ಬಿಡದ ಬಗ್ಗೆ 19 ಮಂದಿ ವಿದ್ಯಾರ್ಥಿಗಳ ಮೇಲೆ ವಿದ್ಯಾರ್ಥಿನಿಯೋರ್ವಳು ದೂರು ದಾಖಲು ಮಾಡಿದ್ದರು. ಅಲ್ಲದೆ ವಿದ್ಯಾರ್ಥಿಯೋರ್ವನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುದಾಗಿ ಆರೋಪಿಸಿ ದೂರುದಾರೆ ವಿದ್ಯಾರ್ಥಿನಿ ಮೇಲೆ ಮತ್ತೋರ್ವ ವಿದ್ಯಾರ್ಥಿನಿ ಪ್ರತಿದೂರು ದಾಖಲು ಮಾಡಿದ್ದಾರೆ.

ಪ್ರಕರಣದಲ್ಲಿ ವಿದ್ಯಾರ್ಥಿಯೋರ್ವನಿಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಆರೋಪದಲ್ಲಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಈ ಎಲ್ಲಾ ಪ್ರಕರಣಗಳ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆದು ಹಿರಿಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.

Edited By : Nagesh Gaonkar
PublicNext

PublicNext

09/03/2022 10:13 pm

Cinque Terre

54.1 K

Cinque Terre

2

ಸಂಬಂಧಿತ ಸುದ್ದಿ