ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್ : ಹೆಚ್ಚುವರಿ ಪೊಲೀಸರ ನಿಯೋಜನೆ

ಉಡುಪಿ: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ತೀರ್ಪು ಹೊರಬೀಳುವ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.

ಶಾಲಾ ಕಾಲೇಜುಗಳಿಗೆ ರಜೆ ಇದ್ದರೂ ಪರೀಕ್ಷೆ ನಡೆಸಲು ವಿನಾಯಿತಿ ನೀಡಲಾಗಿದ್ದು,ನಿಷೇದಾಜ್ಞೆ ಹಿನ್ನಲೆಯಲ್ಲಿ ಸಂಭ್ರಮಾಚರಣೆ, ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಸಭೆ ಸಮಾರಂಭಗಳಿಗೂ ಬ್ರೇಕ್ ಹಾಕಿದೆ.

ಜಿಲ್ಲೆಯಾದ್ಯಂತ ಬಂದೋಬಸ್ತ್ ಗಾಗಿ ಮೂರು ಕೆ ಎಸ್ ಆರ್ ಪಿ, 6 ಡಿ ಎ ಆರ್ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ತೀರ್ಪಿನ ನಂತರ ಪ್ರತಿಭಟನೆ, ಸಂಭ್ರಮಾಚರಣೆಗೆ ಅವಕಾಶ ಇಲ್ಲ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮಾಹಿತಿ ನೀಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

15/03/2022 10:03 am

Cinque Terre

4.63 K

Cinque Terre

1

ಸಂಬಂಧಿತ ಸುದ್ದಿ