ಮಂಗಳೂರು : ಹಿಜಾಬ್ ವಿವಾದದ ತೀರ್ಪು ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಇಂದು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಪೊಲೀಸ್ ರೂಟ್ ಮಾರ್ಚ್ ಮಾಡಲಾಯಿತು.
ನಗರದ ಸರ್ಕ್ಯೂಟ್ ಹೌಸ್ ನಿಂದ ರೂಟ್ ಮಾರ್ಚ್ ಆರಂಭವಾಗಿ ಸುಮಾರು 5-6 ಕಿ.ಮೀ. ನಗರದಾದ್ಯಂತ ಮಾರ್ಚ್ ನಡೆಯಿತು. ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆದಿದ್ದು, ಸರ್ಕ್ಯೂಟ್ ಹೌಸ್ ನಿಂದ ಬಿಜೈ ಮಾರುಕಟ್ಟೆ ಮಾರ್ಗವಾಗಿ ಲಾಲ್ ಬಾಗ್ ಹಾಗೂ ಎಂಜಿ ರಸ್ತೆಯಾಗಿ ಮಾರ್ಚ್ ಸಾಗಿತು.
ಅಲ್ಲದೆ ಇಂದು ಮುನ್ನೆಚ್ಚರಿಕೆ ಕ್ರಮವಾಗಿ ಕೆಎಸ್ ಆರ್ ಪಿ, ಸಿಎಆರ್ ತುಕಡಿ ನಿಯೋಜನೆ ಮಾಡಲಾಗಿದೆ. ತೀರ್ಪಿನ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಾರ್ಚ್ 15ರ ಸಂಜೆ 6ರವರೆಗೆ ನಗರದಾದ್ಯಂತ 144 ಸೆಕ್ಷನ್ ಜಾರಿಯಲ್ಲಿರುತ್ತದೆ.
PublicNext
15/03/2022 11:41 am