ಪುತ್ತೂರು: ಪುತ್ತೂರು ಡಿವೈಎಸ್ಪಿ ವಿರುದ್ಧ ಪ್ರತಿಭಟನೆಗೆ ಹಿಂದೂ ಜಾಗರಣ ವೇದಿಕೆ ನಿರ್ಧರಿಸಿದ್ದು, ಮಾರ್ಚ್ 21 ರಂದು ಬೃಹತ್ ಸಂಖ್ಯೆಯಲ್ಲಿ ಡಿವೈಎಸ್ಪಿ ಕಛೇರಿಗೆ ಮುತ್ತಿಗೆ ಹಾಕಲು ತೀರ್ಮಾನಿಸಿದೆ.
ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ, ಕಾರ್ಯಕರ್ತರನ್ನು ನ್ಯಾಯಾಲಯಕ್ಕೆ ಕಳಿಸುವ ಕೆಲಸದಲ್ಲಿ ಪುತ್ತೂರು ಡಿವೈಎಸ್ಪಿ ಗಾನ.ಪಿ.ಕುಮಾರ್ ನಿರತರಾಗಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆ ಆರೋಪಿಸಿದೆ.
ಹಿಂದೂ ಕಾರ್ಯಕರ್ತರ ಮೇಲೆ ನೀಡಲಾಗುವ ಸುಳ್ಳು ದೂರುಗಳನ್ನು ಸಮರ್ಪಕವಾಗಿ ತನಿಖೆ ನಡೆಸಲಾಗಿಲ್ಲ. ಈ ಹಿನ್ನೆಲೆಯಲ್ಲಿ ಈ ಮುತ್ತಿಗೆ ಪ್ರತಿಭಟನೆಯನ್ನು ನಡೆಸಲು ವೇದಿಕೆ ತೀರ್ಮಾನಿಸಿದೆ.
Kshetra Samachara
15/03/2022 05:11 pm