ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಹಿಜಾಬ್ ತೀರ್ಪನ್ನು ಕೋರ್ಟ್ ಪುನರ್ ಪರಿಶೀಲನೆ ನಡೆಸಬೇಕು: ಪಾಪ್ಯುಲರ್ ಫ್ರಂಟ್

ಉಡುಪಿ: ಕಾಲೇಜು ವಿದ್ಯಾರ್ಥಿನಿಯರಿಗೆ ಹಿಜಾಬ್ ನಿರಾಕರಿಸಿ ಹೈಕೋರ್ಟ್ ನೀಡಿರುವ ಅನ್ಯಾಯದ ತೀರ್ಪು ಸಂವಿಧಾನದ ಮೌಲ್ಯಗಳ ಮೇಲಿನ ದಾಳಿಯಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಹೇಳಿದ್ದಾರೆ.

ಒಂದೆಡೆ, ಹಿಜಾಬ್ ಮುಸ್ಲಿಂ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಹೇಳುವ ಮೂಲಕ ಹೈಕೋರ್ಟ್ ಮುಸ್ಲಿಮರ ವೈಯಕ್ತಿಕ ಕಾನೂನಿನಲ್ಲಿ ಹಸ್ತಕ್ಷೇಪ ನಡೆಸಿದೆ. ಮತ್ತೊಂದೆಡೆ, ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ವ್ಯಕ್ತಿಯ ಆಯ್ಕೆಯ ಸ್ವಾತಂತ್ರ್ಯವನ್ನೂ ಅದು ಕಡೆಗಣಿಸಿದೆ. ಬಿಜೆಪಿ ತನ್ನ ರಾಜಕೀಯ ಲಾಭಕ್ಕೋಸ್ಕರ ಮುಸ್ಲಿಂ ವಿದ್ಯಾರ್ಥಿನಿಯರ ತಲೆವಸ್ತ್ರವನ್ನು ವಿವಾದಕ್ಕೊಳಪಡಿಸಿ ಅಶಾಂತಿ ಸೃಷ್ಟಿಸಿದಾಗ ಗೌರವಾನ್ವಿತ ಹೈಕೋರ್ಟ್, ಧಾರ್ಮಿಕ ಮತ್ತು ಆಯ್ಕೆಯ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲಿದೆ ಎಂಬ ಆಶಾವಾದ ಸಂವಿಧಾನ ಪ್ರೇಮಿಗಳದ್ದಾಗಿತ್ತು. ಆದರೆ ನ್ಯಾಯಾಂಗವು ಇದೀಗ ಅನ್ಯಾಯ ತೀರ್ಪನ್ನು ನೀಡುವ ಮೂಲಕ ನಿರೀಕ್ಷೆಯನ್ನು ಹುಸಿಗೊಳಿಸಿದೆ. ಇಂತಹ ರಾಜಕೀಯಪ್ರೇರಿತವಾದ ತೀರ್ಪುಗಳಿಂದ ಜನರು ನ್ಯಾಯದ ಮೇಲಿನ ಭರವಸೆಯನ್ನು ಕಳೆದುಕೊಳ್ಳುವ ಅಪಾಯವಿದೆ ಎಂದಿದ್ದಾರೆ.

ಹಿಜಾಬ್ ನಿಷೇಧದ ಕುರಿತಾದ ವಿಚಾರ 6 ವಿದ್ಯಾರ್ಥಿನಿಯರಿಗೆ ಮಾತ್ರ ಸಂಬಂಧಿಸಿದ್ದಲ್ಲ. ಬದಲಾಗಿ ಅದು ಧಾರ್ಮಿಕ ಆಚರಣೆಯನ್ನು ಪಾಲಿಸುತ್ತಾ ಬಂದಿರುವ ಎಲ್ಲಾ ವಿದ್ಯಾರ್ಥಿನಿಯರಿಗೂ ಅನ್ವಯಿಸುವಂಥದ್ದು. ಸಾಂವಿಧಾನಕ್ಕೆ ವಿರುದ್ಧವಾದ ಈ ತೀರ್ಪನ್ನು ಕೋರ್ಟ್ ಪುನರ್ ಪರಿಶೀಲನೆ ನಡೆಸಬೇಕು ಹಾಗೂ ಅಲ್ಪಸಂಖ್ಯಾತರ ಹಕ್ಕುಗಳನ್ನು ಎತ್ತಿ ಹಿಡಿಯಬೇಕು ಎಂದು ಯಾಸಿರ್ ಹಸನ್ ಒತ್ತಾಯಿಸಿದ್ದಾರೆ.

Edited By :
Kshetra Samachara

Kshetra Samachara

15/03/2022 07:07 pm

Cinque Terre

21.78 K

Cinque Terre

16