ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಸರಕಾರಿ ಪದವಿ ಪೂರ್ವ ಕಾಲೇಜಿಗೆ ಜಿಲ್ಲಾಧಿಕಾರಿ ಭೇಟಿ: ತೀರ್ಪು ಪಾಲಿಸಲು ಮನವಿ

ಉಡುಪಿ: ಹಿಜಾಬ್ ವಿವಾದ ಪ್ರಾರಂಭಗೊಂಡಿದ್ದ ಉಡುಪಿಯ ಸರಕಾರಿ ಪದವಿ ಪೂರ್ವ ಹೆಮ್ಮಕ್ಕಳ ಕಾಲೇಜಿಗೆ ಇಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಭೇಟಿ ನೀಡಿದರು.

ಕಾಲೇಜಿನ ತರಗತಿಗಳಿಗೆ ತೆರಳಿದ ಡಿಸಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿ ತೀರ್ಪು ಹಿನ್ನೆಲೆಯಲ್ಲಿ ನಿನ್ನೆ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ಇಂದು ಎಂದಿನಂತೆ ತರಗತಿಗಳು ನಡೆಯುತ್ತಿವೆ.ಕಾಲೇಜು ಆವರಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.ಎಲ್ಲರೂ ಹೈಕೋರ್ಟ್ ತೀರ್ಪನ್ನು ಪಾಲಿಸಬೇಕು ಎಂದು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಮನವಿ ಮಾಡಿದರು.

Edited By :
Kshetra Samachara

Kshetra Samachara

16/03/2022 12:37 pm

Cinque Terre

7.35 K

Cinque Terre

1

ಸಂಬಂಧಿತ ಸುದ್ದಿ