ಗಂಗೊಳ್ಳಿ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರವರು ಏಪ್ರಿಲ್ 15 ರಂದು ನಡೆಯುವ ಧಾರ್ಮಿಕ ಸಭೆಗೆ ಭಾಗಿಯಾಗದಂತೆ ನಿರ್ಬಂಧ ಹಾಕಲಾಗಿದೆ.ಗಂಗೊಳ್ಳಿಯ ವೀರೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಕ್ಕೆ ಮುತಾಲಿಕ್ ರವರು ಭಾಗಿಯಾಗಬೇಕಿತ್ತು. ಆದರೆ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾಗಿರುವ ಗಂಗೊಳ್ಳಿಯಲ್ಲಿ ಒಂದು ವೇಳೆ ಪ್ರಚೋದನಕಾರಿ ಭಾಷಣ ಮಾಡಿದರೆ ಶಾಂತಿಗೆ ಭಂಗ ಉಂಟಾಗುತ್ತದೆ ಎನ್ನುವ ಕಾರಣವನ್ನಿಟ್ಟುಕೊಂಡು ಜಿಲ್ಲಾಧಿಕಾರಿ ಕೂರ್ಮ ರಾವ್ ಉಡುಪಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದಾರೆ.
Kshetra Samachara
13/04/2022 07:51 pm