ಮಂಗಳೂರು: ನಗರದ ಹೊರವಲಯದಲ್ಲಿರುವ ಮಳಲಿಯಲ್ಲಿ ದರ್ಗಾ ನವೀಕರಣದ ವೇಳೆ ಹಿಂದೂ ಶೈಲಿಯ ಮರದ ಕೆತ್ತನೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸ್ಥಳದಲ್ಲಿ ಪೊಲೀಸ್ ನಿಯೋಜನೆ ಮಾಡಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿದರು.
ಮಳಲಿಯಲ್ಲಿ ಎರಡೂ ಸಮುದಾಯದವರು ಅನ್ಯೋನ್ಯವಾಗಿದ್ದಾರೆ. ಆದ್ದರಿಂದ ಎರಡೂ ಸಮುದಾಯದವರು ಜಿಲ್ಲಾಡಳಿತ ಪರಿಸ್ಥಿತಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಅದಕ್ಕೆ ನಾವು ಬದ್ಧರಾಗಿದ್ದೇವೆಂದು ಅಭಿಪ್ರಾಯ ವ್ಯಕ್ತವಾಗಿದೆ.
ಇದೀಗ ಒಂದು ವಾರದವರೆಗೆ ದರ್ಗಾ ನವೀಕರಣ ಕಾರ್ಯವನ್ನು ಸ್ಥಗಿತಗೊಳಿಸಲು ತಹಶೀಲ್ದಾರ್ ಸೂಚನೆ ನೀಡಿದ್ದಾರೆ.ಆದರೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿದರು.
PublicNext
22/04/2022 03:44 pm