ಕಾರ್ಕಳ : ಹೆಚ್ಚುವರಿಯಾಗಿ ನೀಡಲಾಗಿರುವ ಈದು ಗ್ರಾಪಂನಲ್ಲಿ ಸಮಪರ್ಕವಾಗಿ ಕರ್ತವ್ಯ ನಿರ್ವಹಿಸದೇ ನಿಯಮ ಉಲ್ಲಂಘಿಸಿರುವ ಆರೋಪದಿಂದಾಗಿ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾ.ಪಂನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿರಾಜ್ ಎಚ್. ಅವರನ್ನು ಅಮಾನತುಗೊಳಿಸಿ ಉಡುಪಿ ಜಿಪಂ ಸಿಇಓ ಡಾ.ನವೀನ್ ಭಟ್ ಆದೇಶ ಹೊರಡಿಸಿದ್ದಾರೆ.
ರವಿರಾಜ್ ಎಚ್. ಅವರಿಗೆ ಪ್ರಭಾರವಾಗಿ ವಹಿಸಿಕೊಡಲಾದ ಈದು ಗ್ರಾ.ಪಂನಲ್ಲಿ ಸಮಪರ್ಕವಾಗಿ ಕರ್ತವ್ಯ ನಿರ್ವಹಿಸದೇ ಹಾಗೂ ಮೇಲಾಧಿಕಾರಿಯವರ ಆದೇಶವನ್ನು ಪಾಲನೆ ಮಾಡದೆ ಸರಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿ ಕರ್ನಾಟಕ ನಾಗರಿಕ ಸೇವಾ ನಿಯಮವನ್ನು ಉಲ್ಲಂಘಿಸಿರುವುದರಿಂದ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕ್ರಮಬದ್ಧ ಇಲಾಖಾ ವಿಚಾರಣೆ ಯನ್ನು ಕಾಯ್ದಿರಿಸಿ ಮುಂದಿನ ಆದೇಶದವರೆಗೆ ಅಮಾನತಿನಲ್ಲಿರಿಸಿ ಆದೇಶ ಹೊರಡಿಸಿಲಾಗಿದೆ ಎಂದು ಸಿಇಓ ಡಾ.ನವೀನ್ ಭಟ್ ತಿಳಿಸಿದ್ದಾರೆ.
Kshetra Samachara
22/04/2022 09:27 pm