ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ. ಆದರೂ ನಿತ್ಯ ಪ್ಲಾಸ್ಟಿಕ್ ಬಳಕೆ ಹೆಚ್ಚಾಗ್ತಿದೆ. ಹೀಗಾಗಿ ಪರಿಸರ ಮಾಲಿನ್ಯ ಆಗುತ್ತಿದೆ.
ಅದಲ್ಲದೆ ಸಾಲಿಡ್ ವೇಸ್ಟ್ ಮ್ಯಾನೇಜ್ ಮೆಂಟ್ ನಲ್ಲಿ ಪ್ಲಾಸ್ಟಿಕ್ ಅಂಶ ಹೆಚ್ಚಾಗಿ ಕಂಡು ಬಂದಿದೆ. ಹಾಗಾಗಿ ಅಂಗಡಿ ಮಾಲೀಕರಿಗೆ ಮಂಗಳೂರು ಮಹಾನಗರ ಪಾಲಿಕೆ (ಮನಪಾ) ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಸಬಾರದು. ಇದು ಪರಿಸರ ಮಾಲಿನ್ಯ ಮಾಡುತ್ತದೆ. ಒಂದು ವೇಳೆ ಪಾಲಿಕೆ ನಿಯಮ ಉಲ್ಲಂಘಿಸಿ ಪ್ಲಾಸ್ಟಿಕ್ ಬಳಸಿದ್ರೆ ಒಂದು ಸಾವಿರದಿಂದ ಹತ್ತು ಸಾವಿರದವರೆಗೆ ದಂಡ ವಿಧಿಸಲು ಅವಕಾಶ ಇದೆ.
ಹೀಗಾಗಿ ಪಾಲಿಕೆ ಆಯುಕ್ತರು ನಿಷೇಧಿತ ಪ್ಲಾಸ್ಟಿಕ್ ಅನ್ನು ಬಳಸಬಾರದು ಎಂದು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಇದಕ್ಕೆ ಜನ ಸಹಕಾರ ನೀಡಬೇಕು ಎಂದು ಎಚ್ಚರಿಕೆ ಸಹ ನೀಡಿದ್ದಾರೆ.
ಇಷ್ಟಾದ ಮೇಲೂ ನಿಯಮ ಮೀರಿದ್ರೆ ಅಂತಹವರ ಉದ್ದಿಮೆ ಪರವಾನಗಿಯನ್ನು ರದ್ದು ಮಾಡ್ತೇವೆ ಎಂದಿದ್ದಾರೆ.
Kshetra Samachara
06/05/2022 05:10 pm