ಉಡುಪಿ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ 1098 ಸಹಯೋಗದಲ್ಲಿ ಮಕ್ಕಳ ಸಹಾಯವಾಣಿ 1098 ದಿನಾಚರಣೆ ಹಾಗೂ ಮೇ -2022 ಮಕ್ಕಳ ಸಹಾಯವಾಣಿ 1098 ಮಾಸಾಚರಣೆ ಕಾರ್ಯಕ್ರಮವನ್ನು ನಳಂದ ಸಭಾಂಗಣ ಸರಕಾರಿ ಸಂಯುಕ್ತ ಪ್ರೌಢಶಾಲೆ ಒಳಕಾಡು ಇಲ್ಲಿ ಹಮ್ಮಿಕೊಳ್ಳಲಾಯಿತು. ಶಾಲಾ ಪ್ರಾರಂಭೋತ್ಸವದ ಮೊದಲನೇ ಹಂತದಲ್ಲಿ ಇಂತಹ ಕಾರ್ಯಕ್ರಮವನ್ನು ಏರ್ಪಡಿಸಿರುವುದು ಮಕ್ಕಳಿಗೆ ತುಂಬಾಪ್ರಯೋಜನಕಾರಿಯಾಗಿರುತ್ತದೆ ಎಂದು ಕಾರ್ಯಕ್ರಮ ಉದ್ಘಾಟಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ತಿಳಿಸಿದರು.
ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಶರ್ಮಿಳಾ ಎಸ್ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಅತಿಥಿ ಗಣ್ಯರಿಗೆ ಹಾಗೂ ವಿದ್ಯಾರ್ಥಿಗಳಿಗೆ 1098 ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಈ ಕಾರ್ಯಕ್ರಮದಲ್ಲಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ನಿರ್ಲಕ್ಷಕ್ಕೆ ಒಳಗಾದ ಪರಿತ್ಯಜಿಸಲ್ಪಟ್ಟ ,ದೌರ್ಜನ್ಯಕ್ಕೊಳಗಾದ ಶೋಷಣೆಗೊಳಗಾದ ಹಾಗೂ ಕುಟುಂಬದಿಂದ ಬೇರ್ಪಟ್ಟ ಮಕ್ಕಳಿಗಾಗಿ ಹಾಗೂ ಪೋಷಕರಿಗಾಗಿ ಕರ್ನಾಟಕ ರಾಜ್ಯದಲ್ಲಿ ಆಪ್ತಸಮಾಲೋಚನೆಯ ಅಗತ್ಯವಿರುವ 0-18 ವರ್ಷದ ಎಲ್ಲಾ ಮಕ್ಕಳಿಗೆ ಉಚಿತ ಆಪ್ತಸಮಾಲೋಚನೆಗಾಗಿ ಟೋಲ್ ಫ್ರೀ ಸಂಖ್ಯೆ 1 4499 ಹಾಗೂ ಮಕ್ಕಳ ಸಹಾಯವಾಣಿ 1098 ಪೋಸ್ಟರ್ ಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.
ಮಕ್ಕಳ ಸಹಾಯವಾಣಿ 1098 ಇದರ ಇತಿಹಾಸದ ಕುರಿತು ಹಾಗೂ ಈ ಸಹಾಯವಾಣಿಯನ್ನು ತೊಂದರೆಗೊಳಗಾದ ಎಲ್ಲಾ ಮಕ್ಕಳು ಸದುಪಯೋಗಪಡಿಸಿಕೊಳ್ಳುವಂತೆ ಮುಖ್ಯ ಅತಿಥಿಗಳಾದ ಶರ್ಮಿಳಾ ಎಸ್ ತಿಳಿಸಿದರು. ಅಧ್ಯಕ್ಷರು ನಗರಸಭೆ ಸುಮಿತ್ರ ನಾಯಕ್ , ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಹಾಗೂ ಕಾರ್ಮಿಕ ಅಧಿಕಾರಿ ಕುಮಾರ್ ಬಿ ಆರ್ , ವಾಸಪ್ಪ ನಾಯಕ್ ಉಪನಿರೀಕ್ಷಕರು ನಗರ ಪೊಲೀಸ್ ಠಾಣೆ ಉಡುಪಿ , ಸಂಧ್ಯಾರಾಣಿ ಮುಖ್ಯೋಪಾಧ್ಯಾಯರು ಸರಕಾರಿ ಪ್ರೌಢಶಾಲೆ ಒಳಕಾಡು, ಮಕ್ಕಳ ಸಹಾಯವಾಣಿ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ನಾಯಕ್ ಸ್ವಾಗತಿಸಿದರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಯಾದ ಸುರಕ್ಷಾ ವಂದಿಸಿದರು.
Kshetra Samachara
17/05/2022 08:51 pm