ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮಳಲಿ ಮಸೀದಿ- ವಿಎಚ್‌ಪಿ ವಿವಾದ ವಿಚಾರಣೆ ಜೂ.14ಕ್ಕೆ ಮುಂದೂಡಿಕೆ

ಮಂಗಳೂರು: ಜಿಲ್ಲಾ ಮೂರನೇ ಹೆಚ್ಚುವರಿ ನ್ಯಾಯಾಲಯದಲ್ಲಿ ಮಳಲಿ ಮಸೀದಿ ವಿವಾದ ವಿಚಾರದಲ್ಲಿ ವಿಚಾರಣೆ ನಡೆಯುತ್ತಿದೆ. ಇಂದು ಮಸೀದಿ ಆಡಳಿತ ಮಂಡಳಿಯ ಪರ ವಕೀಲ ಎಂ.ಪಿ.ಶೆಣೈ ವಾದವನ್ನು ಮಂಡಿಸಿದ್ದಾರೆ. ವಿಎಚ್ ಪಿ ಪರ ವಕೀಲ ಚಿದಾನಂದ ಕೆದಿಲಾಯರಿಗೆ ಜೂ. 14ಕ್ಕೆ ವಾದ ಮಂಡಿಸಲು ಅವಕಾಶ ನೀಡಿ ವಿಚಾರಣೆಯನ್ನು ಮುಂದೂಡಿ ನ್ಯಾಯಾಧೀಶರು ‌ಆದೇಶಿಸಿದ್ದಾರೆ.

ಮಳಲಿ ಮಸೀದಿ ಪರ ವಕೀಲ ಎಂ.ಪಿ.ಶೆಣೈ ವಾದ ಮಂಡಿಸಿ, ಮಳಲಿಯಲ್ಲಿರುವುದು ಮಸೀದಿ ಎಂದು ಮತ್ತೆ ಸಾಬೀತುಪಡಿಸುವ ಅಗತ್ಯವಿಲ್ಲ. ಸರ್ಕಾರಿ ವಕ್ಫ್ ದಾಖಲೆಗಳಲ್ಲಿ ಮಳಲಿಯಲ್ಲಿ ಮಸೀದಿ ಇರುವುದು ದಾಖಲಾಗಿದೆ. ಮಸೀದಿ ಎಂದರೆ ವಕ್ಫ್ ಕಾನೂನಿನ ಪ್ರಕಾರ ಪ್ರಾರ್ಥನಾ ಸ್ಥಳ. ಅಂಥಹ ಸ್ಥಳವನ್ನು ನಿಯಮಗಳ ಪ್ರಕಾರ ವಕ್ಫ್ ಆಸ್ತಿಯೆಂದು ಕರೆಯುತ್ತಾರೆ.

ಒಂದು ಜಾಗವನ್ನು ಪುರಾತನ ಸ್ಮಾರಕವೆಂದು ಹೇಳಲು ಕೇಂದ್ರ ಸರ್ಕಾರದಿಂದ ನೋಟಿಫಿಕೇಶನ್ ಆಗಬೇಕು. ಆದರೆ ಮಳಲಿ ಮಸೀದಿ ಮೇಲೆ ಯಾವುದೇ ಗೆಜೆಟ್ ನೋಟಿಫಿಕೇಶನ್ ಆಗಿಲ್ಲ. ಹೀಗಿರುವಾಗ ಅದನ್ನು ಪುರಾತನ ಸ್ಮಾರಕವೆಂದು ಹೇಳಲು ಸಾಧ್ಯವಿಲ್ಲ. ಅಲ್ಲದೆ ಇದನ್ನು ಸ್ಮಾರಕವೋ ಅಲ್ಲವೋ ಎಂದು ಹೇಳಲು ಸಿವಿಲ್ ಕೋರ್ಟ್ ಗೆ ಅಧಿಕಾರವಿಲ್ಲ. ಹೀಗಾಗಿ ಈ ಅರ್ಜಿಯನ್ನು ವಜಾಗೊಳಿಸುವಂತೆ ಎಂಪಿ ಶೆಣೈ ವಾದ ಮಂಡಿಸಿದ್ದಾರೆ. ಈ ವಾದವನ್ನು ಆಲಿಸಿದ ನ್ಯಾಯಾಧೀಶರು ಜೂನ್ 14ಕ್ಕೆ ವಿಚಾರಣೆ ಮುಂದೂಡಿ ಆದೇಶಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

10/06/2022 06:07 pm

Cinque Terre

2.84 K

Cinque Terre

0

ಸಂಬಂಧಿತ ಸುದ್ದಿ