ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ಯಾವುದೇ ಪ್ರತಿಭಟನೆ ಇಲ್ಲ"; ಪೊಲೀಸ್ ಕಮಿಷನರ್ ಜತೆಗಿನ ಸಭೆಯಲ್ಲಿ ಮುಸ್ಲಿಂ ಮುಖಂಡರ ಸ್ಪಷ್ಟನೆ

ಮಂಗಳೂರು: ನೂಪುರ್ ಶರ್ಮಾ, ಪ್ರವಾದಿ ನಿಂದನೆಯ ಬಳಿಕ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂಬ ಅಪಪ್ರಚಾರ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಇಂದು ಮುಸ್ಲಿಂ ಮುಖಂಡರೊಂದಿಗೆ ಸಭೆ ನಡೆಸಿದರು.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಮಸೀದಿ ಕಮಿಟಿಯ ಮುಖಂಡರೊಂದಿಗೆ ಪೊಲೀಸರು ಸಭೆ ನಡೆಸಿದರು. ಪೊಲೀಸ್ ಕಮಿಷನರ್ ಕಚೇರಿ ಸಭಾಂಗಣದಲ್ಲಿ 50ಕ್ಕೂ ಅಧಿಕ ಮುಸ್ಲಿಂ ಮುಖಂಡರೊಂದಿಗೆ ಕಮಿಷನರ್ ಎನ್.ಶಶಿಕುಮಾರ್, ಡಿಸಿಪಿಗಳಾದ ಹರಿರಾಂ ಶಂಕರ್, ದಿನೇಶ್ ಕುಮಾರ್ ಹಾಗೂ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣಾಧಿಕಾರಿ, ಸಿಬ್ಬಂದಿ ಸಭೆ ನಡೆಸಿ ಶಾಂತಿ- ಸುವ್ಯವಸ್ಥೆ ಕಾಪಾಡುವ ಬಗ್ಗೆ ಚರ್ಚಿಸಿದರು. ಸುಮಾರು 2 ಗಂಟೆಗಳ ಕಾಲ ಸಭೆ ನಡೆಯಿತು.

ಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಎಲ್ಲ ಸಂದರ್ಭದಲ್ಲೂ ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸುತ್ತೇವೆ ಎಂದು ಮುಸ್ಲಿಂ ಮುಖಂಡರು ತಿಳಿಸಿದ್ದಾರೆ. ಅಲ್ಲದೆ, ಪ್ರತಿಭಟನೆ ನಡೆಸುವ ಯಾವುದೇ ಚಿಂತನೆಯಿಲ್ಲ ಎಂದು ಹೇಳಿದ್ದಾರೆ. ಈ ರೀತಿಯ ಜನಸಂಪರ್ಕ ಸಭೆ ಅಧಿಕವಾಗಬೇಕು. ಠಾಣೆಗೆ ಯಾವುದಾದರೂ ವಿಚಾರಕ್ಕೆ ಹೋದ ಸಂದರ್ಭ ತ್ವರಿತ ಸ್ಪಂದನೆ ದೊರಕಬೇಕು. ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸಬೇಕೆಂದು ಮುಸ್ಲಿಂ ಮುಖಂಡರು ಬೇಡಿಕೆ ಇಟ್ಟಿದ್ದಾರೆ. ಪೊಲೀಸ್ ಇಲಾಖೆಯೂ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದರು.

Edited By : Nagesh Gaonkar
Kshetra Samachara

Kshetra Samachara

13/06/2022 04:28 pm

Cinque Terre

8.42 K

Cinque Terre

1

ಸಂಬಂಧಿತ ಸುದ್ದಿ