ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಯೋತ್ಪಾದನಾ ನಿಗ್ರಹ ತಂಡ ಸಿದ್ಧ: ತರಬೇತಿ ಮುಗಿಸಿ ಕರ್ತವ್ಯಕ್ಕೆ ಹಾಜರಾದ 35 ಸಿಬ್ಬಂದಿ

ಮಂಗಳೂರು: ನಗರದ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸಲು ಆಂತರಿಕ ಭದ್ರತಾ ವಿಭಾಗದಡಿ (ಐಎಸ್‌ಡಿ) ನಗರ ಭಯೋತ್ಪಾದನಾ ನಿಗ್ರಹ ತಂಡವು ಅಣಿಯಾಗಿದೆ.

ಭಯೋತ್ಪಾದನಾ ನಿಗ್ರಹ ತಂಡವು 35 ಪೊಲೀಸ್‌ ಸಿಬ್ಬಂದಿಯನ್ನು ಒಳಗೊಂಡಿದೆ. ಈ ತಂಡವು ಬೆಂಗಳೂರಿನ ಕೂಡ್ಲುವಿನ ಸೆಂಟರ್‌ ಫಾರ್‌ ಕೌಂಟರ್‌ ಟೆರರಿಸಂ (ಸಿಸಿಟಿ)ನಲ್ಲಿ 2 ತಿಂಗಳುಗಳ ಕಾಲ ತರಬೇತಿ ಮುಗಿಸಿ ಮಂಗಳೂರಿಗೆ ಆಗಮಿಸಿದೆ. ಈ ತಂಡವು ಮಂಗಳೂರು ಪೊಲೀಸ್‌ ಕಮಿಷನರ್ ಎನ್‌. ಶಶಿಕುಮಾರ್‌, ಡಿಸಿಪಿಗಳಾದ ಹರಿರಾಂ ಶಂಕರ್‌ ಮತ್ತು ದಿನೇಶ್‌ ಕುಮಾರ್‌ ಹಾಗೂ ತಂಡದ ಮುಖ್ಯಸ್ಥ ಸುಬ್ರಹ್ಮಣ್ಯ ಎಂ. ಹಾಗೂ ಹಿರಿಯ ಅಧಿಕಾರಿಗಳ‌ ಸಮ್ಮುಖ ಗೌರವ ರಕ್ಷೆ ಸಲ್ಲಿಸಿದರು.

ತಲಾ 15 ಮಂದಿಯನ್ನು ಒಳಗೊಂಡ ಈ ಎರಡು ತಂಡಗಳು ಕರ್ತವ್ಯ ನಿರ್ವಹಿಸಲಿವೆ. ರಜೆಯಲ್ಲಿರುವಾಗ ಕರ್ತವ್ಯ ನಿರ್ವಹಣೆ ಮಾಡಲು 5 ಮಂದಿ ಹೆಚ್ಚುವರಿ ಸಿಬ್ಬಂದಿ ಇರುತ್ತಾರೆ. ಇವರಿಗೆ ಪ್ರತ್ಯೇಕ ಸಮವಸ್ತ್ರ ಕೂಡ ಇರಲಿದೆ.

Edited By : Nirmala Aralikatti
Kshetra Samachara

Kshetra Samachara

14/06/2022 04:25 pm

Cinque Terre

2.48 K

Cinque Terre

1

ಸಂಬಂಧಿತ ಸುದ್ದಿ