ಮಂಗಳೂರು: ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆಯ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿಭಟನೆಯ ಹೆಸರಿನಲ್ಲಿ ಹಿಂಸೆ ನಡೆಯುತ್ತಿರುವುದನ್ನು ಖಂಡಿಸಿ ಜೂ. 16ರಂದು ಮಂಗಳೂರಿನಲ್ಲಿ ನಡೆಸಲಾಗುತ್ತದೆ ಎಂದು ಹೇಳಲಾಗುತ್ತಿರುವ ಪ್ರತಿಭಟನೆಗೆ ಯಾರೂ ಅನುಮತಿ ಕೋರಿ ಮನವಿಪತ್ರ ಸಲ್ಲಿಸಿಲ್ಲ. ಅಲ್ಲದೆ ಪ್ರತಿಭಟನೆಗೆ ಯಾರಿಗೂ ಅನುಮತಿ ನೀಡಿಲ್ಲ ಎಂದು ಮಂಗಳೂರು ಕೇಂದ್ರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಎಚ್ ಪಿ - ಬಜರಂಗದಳ ಜೂ.16ರಂದು ಮಧ್ಯಾಹ್ನ 3ಗಂಟೆಗೆ ನಗರದ ಪಿವಿಎಸ್ ವೃತ್ತದ ಬಳಿ ಪ್ರತಿಭಟನಾ ಸಭೆ ನಡೆಸಲಾಗುತ್ತದೆ ಎಂಬ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನು ಗಮನಿಸಿ ಮಂಗೆ ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.
ಈ ಪ್ರತಿಭಟನೆಯ ಕುರಿತು ಅಧಿಕೃತವಾಗಿ ಅನುಮತಿ ಕೋರಿ ಯಾರೂ ಪತ್ರ ಸಲ್ಲಿಸಿಲ್ಲ. ಅದಾಗ್ಯೂ ಹಾಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಭದ್ರತೆಯ ಹಿತದೃಷ್ಟಿಯಿಂದ ಯಾವುದೇ ರೀತಿಯ ಪ್ರತಿಭಟನೆ ಮಾಡಲು ಅನುಮತಿ ನೀಡಿಲ್ಲವೆಂದು ಮಂಗಳೂರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ವಿಎಚ್ ಪಿ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ.
Kshetra Samachara
15/06/2022 05:35 pm