ಉಡುಪಿ :ಉಡುಪಿಯಲ್ಲಿ ಇವತ್ತು ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ ನಡೆದಿದ್ದು ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಮನೆ ತಪಾಸಣೆ ನಡೆಸಲಾಗುತ್ತಿದೆ.ಸಣ್ಣ ನೀರಾವರಿ ಇಲಾಖೆ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ಅವರ ಕೊರಂಗ್ರಪಾಡಿಯಲ್ಲಿರುವ ಮನೆಗೆ ಅಧಿಕಾರಿಗಳು ದಾಳಿ ನಡೆಸಿದರು.
ಎಸಿಬಿ ಡಿವೈಎಸ್ ಪಿ ಮಂಜುನಾಥ ಕವರಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಹರೀಶ್ ವಿರುದ್ಧ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಈ ದಾಳಿ ನಡೆಸಿದ್ದು ಮನೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.
Kshetra Samachara
17/06/2022 07:45 am