ಉಡುಪಿ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಜ್ಯಾದ್ಯಂತ ಇಂದು ಮೆಗಾ ಲೋಕ ಅದಾಲತ್ ಆಯೋಜಿಸಲಾಗಿದೆ.ಉಡುಪಿ ಜಲ್ಲೆಯಲ್ಲಿ 15 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥಗೊಂಡಿದ್ದು ಇದೊಂದು ದಾಖಲೆ ಎಂದು ಹೇಳಬಹುದು!
ಸಾರ್ವಜನಿಕರು ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮೆಗಾ ಲೋಕ ಅದಾಲತ್ ಮೂಲಕ ಪರಿಹರಿಸಿಕೊಳ್ಳಲು ಅವಕಾಶ ಕಲದಪುಸಲಾಗಿತ್ತು.
ಅದರಂತೆ ಅದಾಲತ್ನಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣ, ರಾಜ್ಯ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣ, ಸಾಲ ವಸೂಲಾತಿ ನ್ಯಾಯಾಧಿಕರಣದ ಪ್ರಕರಣ, ಕಾಯಂ ಜನತಾ ನ್ಯಾಯಾಲಯ
ದಲ್ಲಿ ಬಾಕಿ ಇರುವ ಪ್ರಕರಣ, ಚೆಕ್ ಅಮಾನ್ಯ ಪ್ರಕರಣ, ಅಕ್ರಮ ಮರಳು ಸಾಗಣೆ ಪ್ರಕರಣ, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣ ಪ್ರಕರಣ, ಕಾರ್ಮಿಕರ ವಿವಾದ, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣ, ಭೂಸ್ವಾಧೀನ ಪ್ರಕರಣ...ಹೀಗೆ ಅನೇಕ ಪ್ರಕರಣಗಳು ಇತ್ಯರ್ಥಗೊಂಡಿದ್ದು ನ್ಯಾಯಾಧೀಶರು ಮತ್ತು ವಕೀಲರು ಖಪಬ್ಲಿಕ್ ನೆಕ್ಸ್ಟ್ ಜೊತೆ ಖುಷಿ ವ್ಯಕ್ತಪಡಿಸಿದ್ದಾರೆ.
ಇನ್ನು ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ ಹಾಗೂ ಪಿಂಚಣಿ ಪ್ರಕರಣ, ಸಾರ್ವಜನಿಕರ ಉಪಯುಕ್ತತೆ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನೂ ಇತ್ಯರ್ಥಪಡಿಲಾಗಿದ್ದು ಕಕ್ಷಿದಾದರೂ ಕೂಡ ಹರ್ಷ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆ ರಾಜಿಯಾಗಬಲ್ಲ ಇಷ್ಟೊಂದು ಸಂಖ್ಯೆಯ ಪ್ರಕರಣಗಳು ಇತ್ಯರ್ಥಗೊಂಡಿದ್ದು ಮೆಗಾ ಲೋಕ ಅದಾಲತ್ ಅಭಿಯಾನ ಸಾರ್ಥಕ ಎನಿಸಿದೆ.
Kshetra Samachara
26/06/2022 11:58 am