ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ಕಾರ್ಯಾಗಾರ

ಉಡುಪಿ: ಪೋಕ್ಸೋ ಕಾಯ್ದೆ ಕುರಿತು ಉಡುಪಿ ಜಿಲ್ಲಾ ಪೋಲೀಸ್ ಅಧಿಕಾರಿಗಳಿಗೆ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಪಂಚಾಯತ್ಎನ್ .ಆರ್ .ಎಲ್ .ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ಮಾಹಿತಿ ನೀಡಿ ಉಡುಪಿ ಜಿಲ್ಲೆ ಪೋಕ್ಸೋ ಕಾಯ್ದೆಯನ್ನು ಅನುಷ್ಠಾನಕ್ಕೆ ತರುವಲ್ಲಿ ಮತ್ತು ಅಪರಾಧ ಪತ್ತೆ ಹಚ್ಚುವಲ್ಲಿ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ ಎಂದರು.

ಅತಿ ಹೆಚ್ಚು ಹೊರ ಜಿಲ್ಲೆಯಿಂದ ಉಡುಪಿಯಲ್ಲಿ ನೆಲಸಿದವರಿಂದ ಇಂತಹ ಅಪರಾಧಗಳು ನಡೆಯುತ್ತಿವೆ. ಜಿಲ್ಲೆಯ ಜನರಿಂದ ಈ ಅಪರಾಧ ನಡೆಯುತ್ತಿರುವುದು ವಿರಳ.ಇಲ್ಲಿನ ಪೊಲೀಸ್ ಅಧಿಕಾರಿಗಳು ಮಕ್ಕಳ ಸ್ನೇಹಿಯಾಗಿ ಕೆಲಸ ಮಾಡುತ್ತಿರುವ ಕಾರಣ ಅಪರಾಧ ಕಡಿಮೆಯಾಗಲು ಸಾದ್ಯವಾಗಿದೆ ಎಂದರು.

ಮಕ್ಕಳು ಮಂದಿನ ಭವಿಷ್ಯ.ಹೀಗಾಗಿ ಪೊಲೀಸ್ ಅಧಿಕಾರಿಗಳು ಒತ್ತಡದ ಕೆಲಸ ಇದ್ದರೂ ನೊಂದ ಮಕ್ಕಳಿಗೆ ನ್ಯಾಯ ನೀಡಬೇಕು. ಸಂತ್ರಸ್ತ ಮಕ್ಕಳಿಗೆ ಪುನರ್ವಸತಿ, ಆರೋಗ್ಯ, ಶಿಕ್ಷಣ ನೀಡಬೇಕಾಗಿರುವುದರಿಂದ ಪ್ರಕರಣ ಬಂದ ತಕ್ಷಣ ವರದಿಯನ್ನು ಮಕ್ಕಳ ಕಲ್ಯಾಣ ಸಮಿತಿಗೆ ನೀಡಬೇಕು.ಪೋಕ್ಸೋ ತಿದ್ದುಪಡಿ ಕಾಯ್ದೆ ಬಗ್ಗೆ ಮಾಹಿತಿ ನೀಡುವ ಮೂಲಕ ಪೋಕ್ಸೋ ಅಪರಾಧಿಗೆ ಶಿಕ್ಷೆ ಹೇಗೆ ಇದೆಯೋ ಹಾಗೆಯೇ ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆದ ಬಗ್ಗೆ ಮಾಹಿತಿ ಗೊತ್ತಿದ್ದೂ ವರದಿ ಮಾಡದ ಅಧಿಕಾರಿಗಳಿಗೂ ಕಾನೂನಿನಲ್ಲಿ ಶಿಕ್ಷೆ ಇದೆ ಎಂದರು.

ಜಿಲ್ಲೆಯ 23 ಪೊಲೀಸ್ ಠಾಣೆಯ ಅಧಿಕಾರಿಗಳು ತರಬೇತಿಯಲ್ಲಿದ್ದು ಪೋಕ್ಸೋ ಕಾಯ್ದೆ ವಿಷಯದಲ್ಲಿ ಚರ್ಚೆ ನಡೆದು ಪ್ರಭಾಕರ ಆಚಾರ್ ಸೂಕ್ತ ಮಾಹಿತಿ ಮತ್ತು ಕಾನೂನಾತ್ಮಕ ವಿಷಯದ ಕುರಿತು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ , ಉಡುಪಿ ಪೊಲೀಸ್ ಉಪಾಧೀಕ್ಷಕ ಸುಧಾಕರ್ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

27/06/2022 01:29 pm

Cinque Terre

3.98 K

Cinque Terre

0

ಸಂಬಂಧಿತ ಸುದ್ದಿ